Friday, August 19, 2022

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡಿದ ಇಲಾಖೆ

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್‌ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.


ಕ್ಲಿನಿಕ್‌ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ.

ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ತಿ ಮ್ಯಾಥ್ಯೂ ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್‌ ಎಂಬ ಒಂದು ಕ್ಲಿನಿಕ್‌ನ್ನು ನಡೆಸುತ್ತಿದ್ದರು.

ಈ ಕುರಿತು ಆರೋಗ್ಯ ಇಲಾಖೆಗೆ ಕೂಡಾ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಡೆಸುವವರ ಬಗ್ಗೆ ಕರ್ನಾಟಕ ಆಯುರ್ವೇದ, ಯುವಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ 3 ಬಾರಿ ನೋಟಿಸ್ ನೀಡಲಾಗಿತ್ತು.

ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುವುದು ಕೆಪಿಎಂಇ ಕಾಯ್ದೆ 19 ಪ್ರಕಾರ ಅಕ್ರಮವಾಗುತ್ತದೆ.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೆಪಿಎಂಇ ನೋಡಲ್ ಅಧಿಕಾರಿ ಡಾ. ದೀಪಾ ಪ್ರಭು ನೇತೃತ್ವದ ತಂಡ ಕ್ಲಿನಿಕ್‌ಗೆ ಬೀಗ ಜಡಿದಿದೆ.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...