Connect with us

    LATEST NEWS

    ನೀವು ದಿನವಿಡೀ ಶೂ, ಚಪ್ಪಲಿಗಳನ್ನು ಧರಿಸುತ್ತೀರಾ: ಈ ಆರೋಗ್ಯ ಸಮಸ್ಯೆ ತಗುಲಬಹುದು, ಇರಲಿ ಎಚ್ಚರ..!

    Published

    on

    ಮಂಗಳೂರು: ಕೆಲವರಿಗೆ ಶೂ, ಚಪ್ಪಲಿಗಳೆಂದರೆ ವಿಪರೀತ ಕ್ರೇಜ್ ಇರುತ್ತದೆ. ಪಾದರಕ್ಷೆಗಳ ರ್ಯಾಕ್ ಪೂರ್ತಿ ಶೂ, ಚಪ್ಪಲಿಗಳನ್ನು ಜೋಡಿಸಿರುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ಮಾತ್ರವಲ್ಲ, ಮನೆಯ ಒಳಗೂ ಚಪ್ಪಲಿಗಳನ್ನು ಧರಿಸುವವರಿದ್ದಾರೆ. ಒಟ್ಟಿನಲ್ಲಿ ಹೇಳಬೇಕೆಂದರೆ ಬರಿಗಾಲಿನಲ್ಲಿ ನಡೆದರೆ ಪಾದ ಸವೆಯುತ್ತದೆಯೇನೋ ಎಂಬಂತೆ ಚಪ್ಪಲಿಗಳನ್ನು ಧರಿಸಿರುತ್ತಾರೆ. ಆದರೆ, ಅತಿ ಹೆಚ್ಚಾಗಿ ಚಪ್ಪಲಿ ಅಥವಾ ಶೂಗಳನ್ನು ಧರಿಸುವುದರಿಂದ ಆರೋಗ್ಯದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ.

    ದಿನನಿತ್ಯ ಪಾದರಕ್ಷೆಗಳನ್ನು ಧರಿಸುವುದರಿಂದ ಕಾಲಿಗೆ ಹಿತ ಎನಿಸಿದರೂ, ಇವುಗಳ ದೀರ್ಘಕಾಲದ ಬಳಕೆಯು ವಿವಿಧ ಆರೋಗ್ಯ ಅಪಾಯಗಳನ್ನು ಉಂಟುಮಾಡಬಹುದು. ಶಿಲೀಂಧ್ರಗಳ ಸೋಂಕಿನಿಂದ ಕೀಲುಗಳ ಒತ್ತಡದವರೆಗೆ ಹಲವು ರೀತಿಯಲ್ಲಿ ಅನಾರೋಗ್ಯಕ್ಕೆ ಕಾರಣವಾಗಬಹುದು. ಶೂಗಳು ಅಥವಾ ಚಪ್ಪಲಿಗಳ ದೀರ್ಘಾವಧಿಯ ಬಳಕೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳನ್ನು ಎದುರಿಸಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

    ದಿನಪೂರ್ತಿ ಪಾದರಕ್ಷೆ ಧರಿಸುವುದರ ಅಡ್ಡಪರಿಣಾಮಗಳು:

    ಕೀಲು ನೋವು:

    ಸ್ಟೈಲಿಶ್ ಶೂ ಅಥವಾ ಚಪ್ಪಲಿ ನೋಡಲು ಆಕರ್ಷಕವಾಗಿ ಕಾಣಬಹುದು. ಆದರೆ ಇದರ ದೀರ್ಘಾವದಿಯ ಬಳಕೆಯು ಚಿಕ್ಕ ವಯಸ್ಸಿನಲ್ಲೇ ಕೀಲು ನೋವಿನ ಸಮಸ್ಯೆಗೆ ಕಾರಣವಾಗಬಹುದು. ಹಿಮ್ಮಡಿ ಎತ್ತರವಿರುವ ಚಪ್ಪಲಿಯನ್ನು (Heeled Slippers) ಧರಿಸುವುದರಿಂದ ಕೀಲು ನೋವಿನಿಂದ ಬಳಲಬಹುದು. ಹೀಗಾಗಿ ಆದಷ್ಟು ಇಂತಹ ಚಪ್ಪಲಿಗಳನ್ನು ಧರಿಸುವುದನ್ನು ಕಡಿಮೆ ಮಾಡುವುದು ಉತ್ತಮ.

    ಮೂಳೆ ಸಮಸ್ಯೆ ಬರಬಹುದು:

    ದಿನದ ಎಲ್ಲಾ ಸಮಯದಲ್ಲೂ ಬೂಟುಗಳನ್ನು ಧರಿಸುವುದರಿಂದ ನಿಮ್ಮ ಪಾದಗಳನ್ನು ಶೂಗಳೊಳಗೆ ಬಿಗಿಯಾಗಿ ಇಡುತ್ತದೆ. ಈ ಬಿಗಿತವು ಹೆಬ್ಬೆರಳಿನ ಉಗುರಿನೊಂದಿಗೆ ಹೆಬ್ಬೆರಳಿನ ಜಂಟಿ ಮೂಳೆಯು ಬೆಳೆಯಲು ಕಾರಣವಾಗಬಹುದು. ಇದನ್ನು ಹ್ಯಾಮರ್ ಟೋ ಎಂದೂ ಕರೆಯುತ್ತಾರೆ. ಬೂಟುಗಳನ್ನು ಅತಿಯಾಗಿ ಧರಿಸಿದ್ರೆ, ಹೆಬ್ಬೆರಳಿನ ಮೂಳೆ ವಕ್ರವಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಬಹಳ ಮುಖ್ಯ.

    ಸೋಂಕು ತಗುಲಬಹುದು:

    ಬೂಟುಗಳು ಅಥವಾ ಚಪ್ಪಲಿಗಳ ಅತಿ ಹೆಚ್ಚಿನ ಬಳಕೆಯು ಸಂಧಿವಾತದ ಸಮಸ್ಯೆಯನ್ನು ಉಂಟು ಮಾಡಬಹುದು. ಇದರಿಂದ ನಿಮ್ಮ ಪಾದಗಳಲ್ಲಿ ಬ್ಯಾಕ್ಟೀರಿಯಾದ ಸೋಂಕು ಮತ್ತು ಶಿಲೀಂಧ್ರಗಳ ಬೆಳವಣಿಗೆಯ ಸಾಧ್ಯತೆಯೂ ಸಹ ಹೆಚ್ಚಾಗುವ ಸಾಧ್ಯತೆಯಿದೆ. ದಿನವಿಡೀ ಶೂಗಳು ಮತ್ತು ಚಪ್ಪಲಿಗಳನ್ನು ಧರಿಸುವುದರಿಂದ ನಿಮ್ಮ ಪಾದಗಳಿಗೆ ಗಾಳಿಯಾಡುವುದಿಲ್ಲ. ದೇಹಕ್ಕೆ ಹೇಗೆ ಗಾಳಿ, ಬೆಳಕು ಅಗತ್ಯವೋ ಅದೇ ರೀತಿ ಪಾದಗಳಿಗೂ ಸಹ ಸೂರ್ಯನ ಬೆಳಕು ಮತ್ತು ಗಾಳಿಯ ಅಗತ್ಯವಿರುತ್ತದೆ. ಹೀಗಾಗಿ ಗಾಳಿ, ಬೆಳಕಿಗೆ ಪಾದ ಒಡ್ಡದಿದ್ದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು.

    ಆಯುರ್ವೇದದ ಪ್ರಕಾರ, ಪ್ರತಿದಿನ ಸ್ವಲ್ಪ ಕಾಲ ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯಲು ಸಲಹೆ ನೀಡಲಾಗುತ್ತದೆ. ಹಾಗೆಯೇ ನೆಲದ ಮೇಲೆ ಬರಿಗಾಲಿನಲ್ಲಿ ನಡೆಯುವುದರಿಂದ, ಒತ್ತಡವನ್ನು ಕಡಿಮೆ ಮಾಡಬಹುದು.

    Click to comment

    Leave a Reply

    Your email address will not be published. Required fields are marked *

    LATEST NEWS

    ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃ*ತ್ಯು

    Published

    on

    ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

    ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃ*ತರು ಎಂದು ಗುರುತಿಸಲಾಗಿದೆ.

    ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ವಿಡಿಯೋ ನೋಡಿ:

    Continue Reading

    LATEST NEWS

    ಭರ್ಜರಿ ಶಾಕ್ ಕೊಟ್ಟ ಕೇಂದ್ರ ಸರ್ಕಾರ ! ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ !

    Published

    on

    ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.


    ವಿಂಡ್​ಫಾಲ್ ಟ್ಯಾಕ್ಸ್ ಎಂದರೇನು ?
    ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.

    ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.

    Continue Reading

    LATEST NEWS

    ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ

    Published

    on

    ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ‌ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.

    ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

    ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.

    ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.

    Continue Reading

    LATEST NEWS

    Trending