Friday, July 1, 2022

ಮಲ್ಪೆ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದಾಗ ಹಾರ್ಟ್ ಅಟ್ಯಾಕ್-ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ.

ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ.


ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಇವರು ಮುಂಜಾನೆ ವೇಳೆ ಮೀನುಗಾರಿಕೆ ಕೆಲಸ ಮುಗಿಸಿಕೊಂಡು ತನ್ನ ಸೋದರಿ ಮಗ ಕಿರಣ್ ಅವರ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು.

ಈ ವೇಳೆ ಪ್ರತಾಪ್ ಅಸ್ವಸ್ಥಗೊಂಡು ತತ್‌ಕ್ಷಣ ಕಿರಣ್ ಮೈಮೇಲೆ ಬಿದ್ದಿದ್ದರು. ತಕ್ಷಣವೇ ಕಲ್ಯಾಣಪುರ ಗೊರಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಹೈಟೆಕ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರತಾಪ್ ಸಾವನ್ನಪ್ಪಿರುವುದಾಗಿ ದೃಢೀಕರಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು...