Wednesday, October 5, 2022

ಗಂಡನ ಮನೆಗೆ ಹೊರಡುವ ಸಂದರ್ಭ ಕಣ್ಣೀರಿಟ್ಟ ನವವಧುವಿಗೆ ಹೃದಯಾಘಾತ

ಓಡಿಶಾ : ಮದುವೆ ದಿನ ತನ್ನ ತಂದೆ ತಾಯಿಯನ್ನು ಬಿಟ್ಟು ಗಂಡನ ಮನೆಗೆ ಹೋರಡುವ ಸಂದರ್ಭ ಗಳಗಳನೆ ಅತ್ತ ನವವಧು, ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಓಡಿಶಾದ ಸೋನೆಪುರದಲ್ಲಿ ನಡೆದಿದೆ.


ಮೃತಪಟ್ಟ ನವವಧುವನ್ನು ರೋಸಿ ಸಾಹು ಎಂದು ಗುರುತಿಸಲಾಗಿದ್ದು, ಜುಲಂಡಾ ಗ್ರಾಮದ ನಿವಾಸಿಯಾಗಿದ್ದ ಯುವತಿ ಟೆಂಟಲು ಗ್ರಾಮದ ಬಿಸಿಕೇಶನ್ ಎಂಬ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.


ಮದವೆಯಾಗಿರುವ ರೋಸಿಯನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವನ್ನು ಮಾಡಲಾಗುತ್ತಿತ್ತು. ಈ ವೇಳೆ ರೋಸಿ ತವರು ಮನೆಯಿಂದ ಪತಿಯ ಮನೆಗೆ ಹೋಗಬೇಕು ಎಂದು ಕಣ್ಣಿರು ಹಾಕಿದ್ದಾಳೆ. ಈ ವೇಳೆ ಹೃದಯಾಘಾತದಿಂದ ನಿಂತಲ್ಲೇ ಕುಸಿದು ಬಿದ್ದಿದ್ದಾಳೆ.

ಕೂಡಲೇ ಅಲ್ಲಿ ಇದ್ದವರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿ ಆಸ್ಪತ್ರೆಗೆ ಕರೆತರುವ ಮೊದಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ. ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...