ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ.
ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ಇತರರೊಂದಿಗೆ ನೃತ್ಯ ಮಾಡುತ್ತಿದ್ದರು.
ಈ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಆಸ್ಪತ್ರೆಗೆ ತಲುಪುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.