Connect with us

    DAKSHINA KANNADA

    ದ.ಕ ಜಿಲ್ಲಾ ಪತ್ರಕರ್ತರಿಗೆ ಹೃದಯಸ್ಥಂಬನದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

    Published

    on

    ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ನಿಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿಂದು ಹಮ್ಮಿಕೊಂಡ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

    ಇಂದಿಗೂ ಪ್ರತಿ ವರ್ಷ ನಮ್ಮ ದೇಶದ ದಲ್ಲಿ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಸೇರಿಸುವ ಮೊದಲೇ ಸಾವಿರಾರು ರೋಗಿಗಳು ಸಾವನ್ನ ಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ದೊರೆತರೆ ಸಾಕಷ್ಟು ಅಮೂಲ್ಯ ಜೀವಗಳನ್ನು ಉಳಿಸಬಹುದು.

    ಅದಕ್ಕಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಪ್ರಥಮ ಚಿಕಿತ್ಸೆ ಯ ಮಾಹಿತಿ ಕೌಶಲ್ಯ ವನ್ನು ನೀಡುವ ಕೆಲಸ ಕ್ಷೇಮದ ಮೂಲಕ ನಡೆಯುತ್ತಿದೆ ಎಂದು ಡಾ.ಸತೀಶ್ ಕುಮಾರ್ ಭಂಡಾರಿ ಹೇಳಿದರು.

    ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಪ್ರೊಫೆಸರ್ ಡಾ.ಗಾಯತ್ರಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ವಹಿಸಿದ್ದರು.

    ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾದ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡದ ಸದಸ್ಯರಾದ ಡಾ.ವೈದೇಹಿ ಭೃಗು, ಡಾ.ವರದಾ ಕಂಜಲ್ಕರ್, ಡಾ.ವೈಭವ್ ಯಾದವ್,ಡಾ.ವೀಣಾ ಮಾಧವನ್ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಿದರು.

    ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೊಪಿಸಿದರು.

    ಉಪಾಧ್ಯಕ್ಷ ಅನ್ಸಾರ್ ಇನೋಳಿ ಕಾರ್ಯಕ್ರಮ ಸಂಯೋಜಿಸಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಹಾಗು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾಗಿ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡ ದ ಸದಸ್ಯರಾದ ಡಾ.ವೈದೇಹಿ ಭೃಗು,ಡಾ.ವರದಾ ಕಂಜಲ್ಕರ್, ಡಾ.ವೈಭವ್ ಯಾದವ್,ಡಾ.ವೀಣಾ ಮಾಧವನ್ ಭಾಗವಹಿಸಿ ಪ್ರಾತ್ಯಕ್ಷಿಕೆ ಯೊಂದಿಗೆ ತರಬೇತಿ ನೀಡಿದರು.

     

    BELTHANGADY

    ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!

    Published

    on

    ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.

    ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು.  ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ  ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.  ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಚೆನ್ನೈನಲ್ಲಿ ರೋವರ್ಸ್ ರಾಷ್ಟ್ರೀಯ ಅಥ್ಲೇಟಿಕ್ಸ್ ಕೂಟ ; ಸಾಧನೆ ಮೆರೆದ ಮಾಸ್ಟರ್ ಅನ್ಶ್ ಕಿರಣ್

    Published

    on

    ಮಂಗಳೂರು : ಡಿ.22 ನೇ ತಾರೀಖಿನಂದು ಚೆನ್ನೈನಲ್ಲಿ ನಡೆದ ರೋವರ್ಸ್ ರಾಷ್ಟ್ರೀಯ ಅಥ್ಲೇಟಿಕ್ಸ್ ಕೂಟದಲ್ಲಿ 9 ವರ್ಷದ ಕೆಳಗಿನ ವಯೋಮಿತಿಯ 50 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದಲ್ಲಿ ಕಂಚಿನ ಪದಕವನ್ನು ಮಾಸ್ಟರ್ ಅನ್ಶ್ ಕಿರಣ್ ಪಕ್ಕಳ ಪೆರ್ಮಂಕಿಗುತ್ತು ಪಡೆದಿದ್ದಾರೆ.


    ಮುಂದೆ ದುಬೈನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಅಥ್ಲೇಟಿಕ್ಸ್ ಕೂಟಕ್ಕೆ ಭಾರತದಿಂದ ಸ್ಪರ್ಧಿಸಲು ಅನ್ಶ್ ಆಯ್ಕೆಯಾಗಿದ್ದಾರೆ. ಅವರು ಮಂಗಳೂರು ಅಶೋಕನಗರದ ಎಸ್.ಡಿ.ಎಮ್ ಸ್ಕೂಲ್‌ನಲ್ಲಿ 4ನೇ ತರಗತಿ ಕಲಿಯುತ್ತಿದ್ದು, ಪೆರ್ಮಂಕಿಗುತ್ತು ಕಿರಣ್ ಪಕ್ಕಳ ಹಾಗೂ ಮೂಲ್ಕಿ ಪಂಚಿನಡ್ಕ ದಾಕ್ಷಾಯಿಣಿ ಕೆ. ಅವರ ಸುಪುತ್ರನಾಗಿದ್ದು , ಮಂಗಳೂರಿನ ಮಂಗಳಾ ಅಥ್ಲೇಟಿಕ್ಸ್‌ನಲ್ಲಿ ದಿನೇಶ್‌ ಕುಂದರ್‌ ಅವರಲ್ಲಿ ತರಬೇತಿ ಪಡೆದಿದ್ದಾರೆ.

    Continue Reading

    DAKSHINA KANNADA

    ಕರಾವಳಿ ಉತ್ಸವ: ಕದ್ರಿ ಪಾರ್ಕಿನಲ್ಲಿ ರೋಮಾಂಚಕಾರಿಯಾದ ಚಿಟ್ಟೆ ಪ್ರದರ್ಶನ

    Published

    on

    ಮಂಗಳೂರು : ಕೆಲವು ವರ್ಷಗಳ ಬಳಿಕ ಈ ಬಾರಿ ಮತ್ತೆ ಆರಂಭಗೊಂಡಿರುವ ಕರಾವಳಿ ಉತ್ಸವ ಎರಡೇ ದಿನಗಳಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇದಕ್ಕೆ ಜಿಲ್ಲಾಡಳಿತ ಉತ್ತಮ ವ್ಯವಸ್ಥೆಯನ್ನು ಕೂಡಾ ಮಾಡಿದ್ದು, ಈ ಬಾರಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಸಂಘಟಿಸಿರುವುದಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ.

    ಡಿಸೆಂಬರ್ 21ರಿಂದ ಆರಂಭಗೊಂಡಿರುವ ಕರಾವಳಿ ಉತ್ಸವದ ಆಕರ್ಷಕ ಮೆರವಣಿಗೆ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡಿವೆ. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಡಿ.೨೧ರಿಂದ ಜನವರಿ ೧೯ರವರೆಗೆ ನಡೆಯಲಿದೆ. ಪ್ರತೀ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಝಲಕ್ ಇರಲಿದೆ. ಕರಾವಳಿ ಕರ್ನಾಟಕದ ಕಲೆ, ಕರಕುಶಲ ಮತ್ತು ಖಾದ್ಯಗಳ ಪ್ರದರ್ಶನ, ಸಾಂಸ್ಕೃತಿಕ ವೈವಿಧ್ಯಗಳ ಜೊತೆಗೆ ಮನೋರಂಜನೆಯ ಭರಪೂರವಿದೆ. ಇದಲ್ಲದೇ ಡಿ.29ರವರೆಗೆ ಮೇರಿಹಿಲ್ ಹೆಲಿಪ್ಯಾಡಿನಲ್ಲಿ ಹೆಲಿಕಾಫ್ಟರ್ ರೈಡ್ ಆರಂಭಿಸಲಾಗಿದ್ದು, ಇದಕ್ಕೂ ಬಹಳಷ್ಟು ಜನ ಆಗಮಿಸುತ್ತಿದ್ದಾರೆ. ಡಿ.22ರಿಂದ ಜ.19ರವರೆ ಕದ್ರಿ ಪಾರ್ಕಿನಲ್ಲಿ ರೋಬೋಟಿಕ್ ಚಿಟ್ಟೆ ಪ್ರದರ್ಶನವಿದ್ದು, ಈ ಪ್ರದರ್ಶನವನ್ನು ವೀಕ್ಷಣೇ ಮಾಡಲು ಬಹಳಷ್ಟು ಜನ ಆಗಮಿಸುತ್ತಿದ್ದಾರೆ.

    ಶನಿವಾರ ಮತ್ತು ಭಾನುವಾರ ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಕಂಡು ಬಂದಿದ್ದು, ಈ ಪ್ರದರ್ಶನ ಸಂಜೆ 4 ರಿಂದ ರಾತ್ರಿ 9 ರವರೆಗೆ ಮಾತ್ರ ಇರಲಿದೆ. ಅಲ್ಲದೆ ಇಂದು ವಸ್ತುಪ್ರದರ್ಶನ ವೇದಿಕೆಯಲ್ಲಿ ನೃತ್ಯರೂಪಕವಿರಲಿದೆ. ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಇವರಿಂದ ಕಾರ್ಯಕ್ರಮವಿದೆ. ನಾಳೆ ಸಂಜೆ ದೇವದಾಸ್ ಕಾಪಿಕಾಡ್‌ ನಿದೇಆರ್ಶನದ ತುಳುಹಾಸ್ಯ ನಾಟಕ ಎರ್ಲಾ ಗ್ಯಾರಂಟಿ ಅತ್ತ್‌ ಎನ್ನುವ ನಾಟಕ ವಸ್ತು ಪ್ರದರ್ಶನ ವೇದಿಕೆಯಲ್ಲಿ ಪ್ರದರ್ಶಿಸಲ್ಪಡಲಿದೆ.

     

    Continue Reading

    LATEST NEWS

    Trending