ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ನಿಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿಂದು ಹಮ್ಮಿಕೊಂಡ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿಗೂ ಪ್ರತಿ ವರ್ಷ ನಮ್ಮ ದೇಶದ ದಲ್ಲಿ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಸೇರಿಸುವ ಮೊದಲೇ ಸಾವಿರಾರು ರೋಗಿಗಳು ಸಾವನ್ನ ಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ದೊರೆತರೆ ಸಾಕಷ್ಟು ಅಮೂಲ್ಯ ಜೀವಗಳನ್ನು ಉಳಿಸಬಹುದು.
ಅದಕ್ಕಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಪ್ರಥಮ ಚಿಕಿತ್ಸೆ ಯ ಮಾಹಿತಿ ಕೌಶಲ್ಯ ವನ್ನು ನೀಡುವ ಕೆಲಸ ಕ್ಷೇಮದ ಮೂಲಕ ನಡೆಯುತ್ತಿದೆ ಎಂದು ಡಾ.ಸತೀಶ್ ಕುಮಾರ್ ಭಂಡಾರಿ ಹೇಳಿದರು.
ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಪ್ರೊಫೆಸರ್ ಡಾ.ಗಾಯತ್ರಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಹಿಸಿದ್ದರು.
ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾದ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡದ ಸದಸ್ಯರಾದ ಡಾ.ವೈದೇಹಿ ಭೃಗು, ಡಾ.ವರದಾ ಕಂಜಲ್ಕರ್, ಡಾ.ವೈಭವ್ ಯಾದವ್,ಡಾ.ವೀಣಾ ಮಾಧವನ್ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಿದರು.
ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೊಪಿಸಿದರು.
ಉಪಾಧ್ಯಕ್ಷ ಅನ್ಸಾರ್ ಇನೋಳಿ ಕಾರ್ಯಕ್ರಮ ಸಂಯೋಜಿಸಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಹಾಗು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾಗಿ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡ ದ ಸದಸ್ಯರಾದ ಡಾ.ವೈದೇಹಿ ಭೃಗು,ಡಾ.ವರದಾ ಕಂಜಲ್ಕರ್, ಡಾ.ವೈಭವ್ ಯಾದವ್,ಡಾ.ವೀಣಾ ಮಾಧವನ್ ಭಾಗವಹಿಸಿ ಪ್ರಾತ್ಯಕ್ಷಿಕೆ ಯೊಂದಿಗೆ ತರಬೇತಿ ನೀಡಿದರು.
ವಿಟ್ಲ: ದೈವ ನರ್ತಕ ಶತಾಯುಷಿ ದೊಡ್ಡಬಾಬು ಪಂಡಿತ್(100) ಅಲ್ಪಕಾಲದ ಅ*ಸೌಖ್ಯದಿಂದ ನಿ*ಧನರಾಗಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಸುರುಳಿ ಮೂಲೆಯ ಹಿರಿಯ ದೈವ ನರ್ತಕರಾಗಿದ್ದ ಪಂಡಿತ್ ಇ*ಹಲೋಕ ತ್ಯಜಿಸಿದ್ದಾರೆ.
ದೈವಾರಾಧನೆಯಲ್ಲಿ ಭಕ್ತಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು. ಶತಾಯುಶಿಯಾಗಿದ್ದ ಪಂಡಿತ್ ಕೆಲಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಕೊರಗಜ್ಜ, ಪಂಜುರ್ಲಿ, ಕಲ್ಲುಟ್ಟಿ, ಸೇರಿ ಇತರ ದೈವಗಳಿಗೆ ದೈವ ನರ್ತಕನಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ.
ಸಂಜೆ 7 ಗಂಟೆಯಿಂದ ಚರ್ಚ್‌ಗಳಲ್ಲಿ ಕ್ಯಾರೋಲ್ ಗಾಯನ, ವಿಶೇಷ ಬಲಿಪೂಜೆ, ಜಾಗತಿಕ ಶಾಂತಿಗಾಗಿ ಪ್ರಾರ್ಥನೆ ನಡೆಯುತ್ತವೆ. ಬಲಿಪೂಜೆಯ ಬಳಿಕ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡುವುದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಮಂಗಳೂರು ನಗರ ಸಹಿತ ಜಿಲ್ಲೆಯ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ಅಂಗಡಿ, ಬೇಕರಿಗಳ ಮುಂಭಾಗದಲ್ಲಿ ಸೋಮವಾರ ಜನಸಂದಣಿ ಹೆಚ್ಚಿತ್ತು. ಮಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಹಲವು ಚರ್ಚ್‌ಗಳಲ್ಲಿ, ಕ್ರೈಸ್ತರ ಮನೆಗಳಲ್ಲಿ ತಯಾರಿಗಳು ಬಿರುಸು ಪಡೆದಿದೆ.
ಹಬ್ಬದ ಹಿನ್ನೆಲೆ ಕೆಥೋಲಿಕ್ ಹಾಗೂ ಪ್ರೊಟೆಸ್ಟೆಂಟ್‌ನ ವಿವಿಧ ಚರ್ಚ್‌ಗಳನ್ನು ವಿದ್ಯುದ್ದೀಪದ ಅಲಂಕಾರ ಮಾಡಲಾಗಿದೆ. ಗೋದಲಿ, ನಕ್ಷತ್ರಗಳೊಂದಿಗೆ ಅಲಂಕರಿಸಲಾಗಿದೆ. ಪ್ರೊಟೆಸ್ಟೆಂಟ್ ಧರ್ಮಪ್ರಾಂತದ ಬಲ್ಮಠ ಸಿಎಸ್‌ಐ ಶಾಂತಿ ಕ್ಯಾಥೆಡ್ರಲ್, ಹೆಬಿಕ್ ಮೆಮೋರಿಯಲ್ ಚರ್ಚ್ ಗೋರಿಗುಡ್ಡ, ಕಾಂತಿ ಚರ್ಚ್ ಜಪ್ಪು, ಕೋಡಿಕ್ಕಲ್ ಕ್ರಿಸ್ಟ್ ಚರ್ಚ್‌ಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿವೆ. ಕೆಥೋಲಿಕ್ ಚರ್ಚ್‌ಗಳಾದ ನಗರದ ರೊಸಾರಿಯೋ ಕ್ಯಾಥೆಡ್ರಲ್, ಮಿಲಾಗ್ರಿಸ್, ಕೊರ್ಡೆಲ್, ಬೆಂದೂರ್‌ವೆಲ್, ಅಶೋಕನಗರ, ಬೊಂದೆಲ್, ವಾಮಂಜೂರು, ಪಾಲ್ದನೆ, ಕುಲಶೇಖರ, ಫಳ್ನೀರ್, ಕಾಸಿಯಾ, ಕೂಳೂರು, ಬಿಜೈ, ಬಜಾಲ್, ಶಕ್ತಿನಗರ, ಬಿಕರ್ನಕಟ್ಟೆ ಸಹಿತ ವಿವಿಧ ಚರ್ಚ್‌ಗಳನ್ನು ವಿದ್ಯುತ್‌ದೀಪಗಳಿಂದ ಅಲಂಕರಿಸಲಾಗಿದೆ.
“ರಾಣಿ” ಎಂಬ ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಮ ಮೂಲಕ ಬನ್ನೇರು ಘಟ್ಟದಿಂದ ತರಲಾಗಿದ್ದು, ಅಲ್ಲಿಗೆ ಇಲ್ಲಿಂದ ಒಂದು ಗಂಡು ಹುಲಿಯನ್ನು ನೀಡಲಾಗಿತ್ತು.
ಪ್ರಸ್ತುತ ಪಿಲಿಕುಲ ಮೃಗಾಲಯದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ ಬಳಿಕ ಗುರುತಿಸಲಾಗುವುದು ಎಂದು ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಎಚ್. ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.