Friday, August 12, 2022

ರಾಜ್ಯದ ಕರಾವಳಿಯಲ್ಲಿ ಆ.8ರ ತನಕ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಆಗಸ್ಟ್ 8 ವರೆಗೆ ವ್ಯಾಪಕ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಕರಾವಳಿಯ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾದರೆ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ..

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಮುಂಜಾಗೃತಾ ಕ್ರಮವಾಗಿ ಇಂದು ಆ.5 ಮತ್ತು ನಾಳೆ ಆ.6ರಂದು ಯಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಿಜಾಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್‌ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...