Monday, May 23, 2022

ಕೇರಳದಲ್ಲಿ ಮುಂದುವರಿದ ವರುಣನ ಆರ್ಭಟ: ಸಾವಿನ ಪ್ರಮಾಣ 15ಕ್ಕೆ ಏರಿಕೆ, ಹಲವರು ನಾಪತ್ತೆ

ಕೊಟ್ಟಾಯಂ: ಮಹಾಮಳೆಗೆ ಕೇರಳ ತತ್ತರಿದ್ದು, ವರುಣನ ಆರ್ಭಟದಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟ 15 ಜನರಲ್ಲಿ ಕೊಟ್ಟಾಯಂ ನಲ್ಲಿ 12 ಮಂದಿ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ.


ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮತ್ತು ಇಡುಕ್ಕಿ ಜಿಲ್ಲೆಯ ಪಶ್ಚಿಮ ಭಾಗಗಳಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ ಉಂಟಾಗಿದೆ. ಕೊಟ್ಟಾಯಂ ಜಿಲ್ಲೆಯ ಕೂಟ್ಟಿಕ್ಕಲ್ ಪಂಚಾಯತ್ ವ್ಯಾಪ್ತಿಯಲ್ಲಿ ಭೂಕುಸಿತಕ್ಕೆ ಮೂರು ಮನೆಗಳು ಮತ್ತು ಟೀ ಅಂಗಡಿಯೊಂದು ಕೊಚ್ಚಿಹೋಗಿದೆ. ಕೂಟ್ಟಿಕ್ಕಲ್ ನಲ್ಲಿ ಮೂರು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ.


ನಾಪತ್ತೆಯಾದವರ ಪತ್ತೆಗೆ ಹುಡುಕಾಟ ನಿರಂತರವಾಗಿ ನಡೆಯುತ್ತಿದೆ. ಎನ್ ಡಿಆರ್ ಎಫ್ ಮತ್ತು ಶ್ವಾನದಳದ ರಕ್ಷಣಾ ಕಾರ್ಯಕ್ಕೆ ಭಾರೀ ಮಳೆ ಅಡ್ಡಿಯಾಗಿದೆ.

ಪೂಂಜಾರ್ ತೆಕ್ಕೆಕ್ಕರ ಚೋಳತಡಂ, ಮುಂಡಕ್ಕಾಯಂ ಸಮೀಪದ ಇಂಚಿಯಾನಿ ಮತ್ತು ಇಡುಕ್ಕಿಯ ಪೆರುವಂತನಂ ಸಮೀಪದ ಪುಲ್ಲುಪಾರದಲ್ಲಿ ಭೂಕುಸಿತ ಸಂಭವಿಸಿದರೂ, ಅಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಯೆಂದಾಯಾರ್, ಇಲಂಕಾಡು ಮತ್ತು ಕೊಕ್ಕಾಯಾರ್ ಸೇರಿದಂತೆ ಜನರು ಹಲವಾರು ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...