ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಿದ್ದು, ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ ನೀರು ತುಂಬಿಹೋಗಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಬೆಳಗ್ಗೆಯಿಂದ ಜಿಟಿಜಿಟಿ ಮಳೆಯಾಗಿದೆ. ಅದರಲ್ಲೂ ಸಂಜೆಯ ವೇಳೆಗೆ ಸುರಿದ ಮಳೆ ನಗರವಾಸಿಗಳನ್ನು ಹೈರಾಣಾಗಿಸಿದೆ.
ಮುಂಗಾರಿನ ಆರಂಭಕ್ಕೆ ಒಂದು ಕಡೆ ಜನ ಖುಷಿ ಪಟ್ರೆ, ಚಂಡಿ ಹಿಡಿಸಿದ ಮಳೆಗೆ ಹಿರಿಯರು, ಮಕ್ಕಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.
ಹಲವಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಮಂಗಳೂರು ಮಾತ್ರವಲ್ಲದೆ ಜಿಲ್ಲೆಯಾದ್ಯಾಂತ ಸುರಿದ ಮಳೆ ನಗರವಾಸಿಗಳಿಗೆ ಸ್ವಲ್ಪ ತೊಂದರೆ ಪಟ್ಟರೆ, ಕೃಷಿಕರಿಗೆ ಮಳೆ ಸಂತಸವನ್ನು ತಂದಿದೆ.