ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:20.05.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಿದ್ದಾರೆ.