Monday, May 23, 2022

ಕೇರಳದಲ್ಲಿ ರಣ ಭೀಕರ ಮಳೆಗೆ ಅರ್ಧ ರಾಜ್ಯ ಮುಳುಗಡೆ ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!

ತಿರುವನಂತಪುರಂ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದಾಗಿ ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಅನೇಕ ಕಡೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

2018 ರ ಪ್ರವಾಹದ ಸಮಯದಲ್ಲಿ ಭಾರೀ ಮಳೆಯಂತೆಯೇ ಪತ್ತನಂತಿಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ.

ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಇದರಿಂದ ಅಣೆಕಟ್ಟುಗಳು ಭರ್ತಿಯಾಗಿವೆ. ತಿರುವನಂತಪುರಂನಲ್ಲಿ ಅಗತ್ಯವಿದ್ದರಷ್ಟೇ ಜನರು ಪ್ರಯಾಣಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಲಯನ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ತಿರುವನಂತಪುರಂನ ಹಲವು ಭಾಗಗಳಲ್ಲಿ ನೀರು ತುಂಬಿದ ವರದಿಯಾಗಿದೆ.ಪತ್ತನಂತಿಟ್ಟದಲ್ಲಿ ಅನಾಥೋಡ್ ಅಣೆಕಟ್ಟು ಮತ್ತು ಅದರ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅರ್ಧ ರಾಜ್ಯವೇ ನೀರಿನಿಂದ ಆವರಿಸಿಕೊಂಡಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೇರಲದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಡ್ಯಾಂಗಳ ಗೇಟುಗಳನ್ನು ತೆರೆಯಲಾಗಿದೆ.

ತಿರುವನಂತಪುರ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ, ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ಬಿರುಗಾಳಿಯ ವೇಗ ಗಂಟೆಗೆ 40 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಸಿದೆ.

LEAVE A REPLY

Please enter your comment!
Please enter your name here

Hot Topics