Connect with us

    LATEST NEWS

    ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.

    Published

    on

    ಚಿಕ್ಕಮಗಳೂರು: ಕಳೆದ ಕೆಲ ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿದೆ. ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

    ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ ಭಾರೀ ಗಾಳಿ ಮಳೆ ಬೀಸುತ್ತಿದೆ. ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ಮಲೆನಾಡಿನ ಕೆಲ ಗ್ರಾಮಗಳ ಜನರು ಕತ್ತಲಲ್ಲಿ ಕಳೆಯುವಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ.

    ಇದನ್ನೇ ಬಂಡವಾಳವಾಗಿ ಇಟ್ಟುಕೂಂಡ ಅಂಗಡಿಯೊಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಡುತ್ತಿದ್ದಾರೆ. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending