Connect with us

BANTWAL

ಇಂದೂ ಸಹ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published

on

ಮಂಗಳೂರು: ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆ ಇಂದೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅದರ ಜೊತೆಗೆ ಇಂದು ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

BANTWAL

Bantwala: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ- ಯುವಕ ಸಾವು..!

Published

on

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಯುವಕ ಮೃತಪಟ್ಟಿರುವ ಘಟನೆ ಫೆ. 25ರಂದು ಬಂಟ್ವಾಳ ತಾಲೂಕಿನ ಬಿ.ಸಿ ರೋಡಿನ ಕೈಕಂಬದಲ್ಲಿ ನಡೆದಿದೆ.

ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು ಆಲಡ್ಕದಲ್ಲಿ ವಾಸ್ತವ್ಯವಿದ್ದ  ಅಶ್ರಫ್ (32) ಮೃತ ಯುವಕ. ಕೈಕಂಬದಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ಅಶ್ರಫ್ ತಮ್ಮ ಸ್ಕೂಟರ್ ನಲ್ಲಿ ಅಂಗಡಿಗೆ ಬಿಡಲು ತೆರಳಿದ್ದರು. 5.30ರ ಸುಮಾರಿಗೆ ಕೈಕಂಬಕ್ಕೆ ತಲುಪಿದ ಅವರು ತನ್ವೀರ್ ರನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಅಶ್ರಫ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

Bantwala: ಇತಿಹಾಸದಲ್ಲೇ ಮೊದಲ ಬಾರಿಗೆ 25ನೇ ವಯಸ್ಸಿನ ಯುವಕ ನ್ಯಾಯಾಧೀಶ

Published

on

ಬಂಟ್ವಾಳ: ಕೇವಲ 25 ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶರ ಪರೀಕ್ಷೆ ಬರೆದು ಪಾಸ್ ಆದ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ದಾಖಲೆ ಬರೆದಿದ್ದಾರೆ.

ಕರ್ನಾಟಕದ ನ್ಯಾಯಾಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 25 ವಯಸ್ಸಿನ ಯುವಕನೊಬ್ಬ ನ್ಯಾಯಾಧೀಶರ ಪೀಠ ಅಲಂಕರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರಿನ ಅನಿಲ್ ಜಾನ್ ಸಿಕ್ವೇರಾ ಈ ಸಾಧನೆ ಮಾಡಿದ್ದಾರೆ. ಬರಿಮಾರಿನ ಕೃಷಿಕರಾದ ಎವೆರಸ್ಟ್‌ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರನಾದ ಅನಿಲ್ ಜಾನ್ ಸಿಕ್ವೇರಾ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರಿಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ. ಬರಿಮಾರ್ ಸಂತ ಜೋಸೆಫರ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ್ದ ಇವರು ಪ್ರೌಢ ಶಿಕ್ಷಣವನ್ನು ಮಾಣಿಯ ಕರ್ನಾಟಕ ಹೈಸ್ಕೂಲ್‌ನಲ್ಲಿ ಮುಗಿಸಿದ್ದರು. ಬಳಿಕ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ ಮುಗಿಸಿದ ಅನಿಲ್ ಜಾನ್ ಸಿಕ್ವೇರಾ ಮಂಗಳೂರಿನ ಎಸ್‌ಡಿಎಂ ‘ಲಾ’  ಕಾಲೇಜಿನಲ್ಲಿ ಬಿಬಿಎ, ಎಲ್ಎಲ್‌ಬಿ ಅಧ್ಯಯನ ಮಾಡಿದ್ದರು. ‘ಲಾ’ ಕಲಿಯುತ್ತಿದ್ದ ಸಮಯದಲ್ಲೇ ಮಂಗಳೂರು ವಕೀಲರ ಸಂಘದ ಜೊತೆಯಲ್ಲೂ ಗುರುತಿಸಿಕೊಂಡಿದ್ದ ಇವರು ಲಾ ಕಂಪ್ಲೀಟ್ ಆದ ಬಳಿಕ ವಕೀಲ ವೃತ್ತಿಯ ಜೊತೆಗೆ ನ್ಯಾಯಾಧೀಶ ಆಗುವ ಕನಸು ಕಂಡಿದ್ದರು. ಹೀಗಾಗಿ ನ್ಯಾಯವಾಧಿಗಳಾದ ದೀಪಕ್ ಡಿಸೋಜಾ,ನವೀನ್ ಪಾಯ್ಸ್ ಅವರ ಮಾರ್ಗದರ್ಶನ ಪಡೆದು ಪರೀಕ್ಷೆ ಬರೆದಿದ್ದಾರೆ. ಕಾಲೇಜು ದಿನಗಳಲ್ಲೇ ನಾಯಕತ್ವವನ್ನು ಮೈಗೂಡಿಸಿಕೊಂಡಿದ್ದ ಅನಿಲ್ ಜಾನ್ ಸಿಕ್ವೇರಾ ಅವರು ಹೈಸ್ಕೂಲ್ ಎಸ್‌ಪಿಎಲ್‌, ಕಾಲೇಜು ಪ್ರಸಿಡೆಂಟ್ ಆಗಿದ್ದು, 2022ರಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಇಂಡಿಯನ್ ಕ್ಯಾಥೋಲಿಕ್ ಯುತ್‌ ಮೂವ್‌ಮೆಂಟ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಕಳೆದ ವರ್ಷ ಹಾಸನದ ಸಕಲೇಶಪುರ ಮೂಲದ ವಿ.ಆರ್. ಅನುಷಾ ಅತ್ಯಂತ ಕಿರಿಯ ನ್ಯಾಯಾಧೀಶ ಪಟ್ಟ ಪಡೆದುಕೊಂಡಿದ್ದು, ಅದನ್ನು ಇದೀಗ ಮಂಗಳೂರಿನ ಅನಿಲ್ ಜಾನ್ ಸಿಕ್ವೇರಾ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಅನಿಲ್ ಅವರ ಈ ಸಾಧನೆಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

Continue Reading

LATEST NEWS

Trending