Monday, October 18, 2021

ನೇಪಾಳದಲ್ಲಿ ವರುಣನ ಆರ್ಭಟ : ಭೂಕುಸಿತಕ್ಕೆ9 ಮಂದಿ ಸಾವು- 22 ಕಣ್ಮರೆ..!

ನೇಪಾಳದಲ್ಲಿ ವರುಣನ ಆರ್ಭಟ : ಭೂಕುಸಿತಕ್ಕೆ9 ಮಂದಿ ಸಾವು- 22 ಕಣ್ಮರೆ..!

ಕಾಠ್ಮಂಡು : ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಭಾನುವಾರ ಮುಂಜಾನೆ ಭೂ ಕುಸಿತ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ನೇಪಾಳದ ನಾಗಪುಜೆ, ಬ್ರಿಖಾರ್ಕ, ನೆವಾರ ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ 2.30 ರ ಸುಮಾರಿಗೆ ಭೂ ಕುಸಿತ ಸಂಭವಿಸಿದೆ.

ಇದರಲ್ಲಿ 9 ಜನರು ಸಾವನ್ನಪ್ಪಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ.

‘ಘಟನಾ ಸ್ಥಳದಿಂದ ಏಳು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಗುಂಥಗ ಪ್ರಾಂತ್ಯದಲ್ಲಿ 22 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಸಿಂಧುಪಾಲ್ಚೌಕ್‌ ಜಿಲ್ಲಾ ಪೊಲೀಸ್ ಕಚೇರಿಯ ಮುಖ್ಯಸ್ಥ ರಾಜನ್‌ ಅಧಿಕಾರಿ ಅವರು ತಿಳಿಸಿದ್ದಾರೆ.

ನೇಪಾಳ ಸೇನೆ, ಪೊಲೀಸ್‌,ಸಶಸ್ತ್ರ ಪೊಲೀಸ್ ಪಡೆಯು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...