ಮಂಗಳೂರು : ಕರಾವಳಿ ಪ್ರದೇಶದ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಸುತ್ತಲಿನ ಜಿಲ್ಲೆಗಳಿಗೆ ವಾರಾಂತ್ಯದವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ,
ಮುಂದಿನ ಎರಡು ದಿನ ಗುಡುಗು ಸಿಡಿಲಿನ ಅಲರ್ಟ್ ಕೂಡ ನೀಡಿದೆ.ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಹಲವೆಡೆ ಮಳೆಯಾಗಿದ್ದು, ಒಂದೆರಡು ಕಡೆ ಭಾರಿ ಮಳೆಯಾಗಿದೆ.
ಸಂಜೆ ಬಂಟ್ವಾಳ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಬಿ.ಸಿ.ರೋಡ್ ಪುಂಜಾಲಕಟ್ಟೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಮನ್ನಾಪು ಎಂಬಲ್ಲಿ ರಸ್ತೆಯ ಪಕ್ಕದಲ್ಲೇ ಇರುವ ಮನೆಯ ಅಂಗಳದಲ್ಲಿ ನೀರು ತುಂಬಿ ಅಡಕೆ ಹಾಳಾದರೆ, ರಸ್ತೆ ಪಕ್ಕದಲ್ಲಿ ಸರಿಯಾಗಿ ನೀರು ಹರಿಯುವ ವ್ಯವಸ್ಥೆಗಳಿಲ್ಲದ ಪರಿಣಾಮ ಅನೇಕ ಮನೆಯವರು ಸಮಸ್ಯೆಗಳನ್ನು ಅನುಭವಿಸಬೇಕಾಯಿತು.
ರಾಯಿ ಸಮೀಪದ ಕೈತ್ರೋಡಿ ಎಂಬಲ್ಲಿ ಕಾಂಕ್ರೀಟು ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದು ಹಾನಿಯಾಗಿದೆ. ಲೊರೆಟ್ಟೋ ಅಗ್ರಾರ್ ಜಕ್ರಿಬೆಟ್ಟು ರಸ್ತೆ ಬದಿ ಸೂಕ್ತ ಚರಂಡಿ ಇಲ್ಲದ ಪರಿಣಾಮ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದು ಕಂಡುಬಂತು.