Saturday, November 27, 2021

ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..!

ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..!

ಮಂಗಳೂರು : ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಯಲ್ಲಿ ನೇತ್ರಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಪ್ಪಿನಂಗಡಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ 30 ಮೀಟರ್ ಗಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ.

ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು ಮೊದಲಾದ ಪ್ರದೇಶಗಳ ಕೃಷಿಭೂಮಿಗೂ ಪ್ರವಾಹದ ನೀರು ಹರಿಯಲಾರಂಭಿಸಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ತನ್ನ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.

ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆಗಳಲ್ಲಿ ನೀರು ವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ.

ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ.

ಸುಬ್ರಹ್ಮಣ್ಯ ಪರಿಸರದಲ್ಲಿ ಇದೀಗ ಮಳೆ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನಲೆಯಲ್ಲಿ ನದಿ ನೀರಿನ ಮಟ್ಟ ಕ್ಷೀಣಿಸಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆ ರಭಸದಿಂದ ಹರಿಯಲಾರಂಭಿಸಿದೆ.

ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ.

ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಈ ಬಾರಿಯೂ ಪ್ರವಾಹದ ರೀತಿಯಲ್ಲಿ ಹರಿಯುತ್ತಿದೆ.

ಹೊಳೆಯ ತೀರದಲ್ಲಿ ನೂತನವಾಗಿ ಕಟ್ಟಿದ್ದ ತಡೆಗೋಡೆಯನ್ನೂ ಪ್ರವಾಹದ ನೀರು ಕೊಚ್ಚಿಕೊಂಡು ಹೋಗಿವೆ.

ಪುತ್ತೂರಿನ ಮುಂಡೂರಿನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮಾಡು ಕುಸಿದ ಘಟನೆ ನಡೆದಿದೆ.

ಮುಂಡೂರು ಗ್ರಾಮದ ಗುತ್ತಿನಪಾಲು ಹೊನ್ನಪ್ಪ ಗೌಡ ಎಂಬವರ ಮನೆಯ ಮಾಡಿನ ಎರಡು ಬದಿಯ ಹಲವಾರು ಹಂಚುಗಳು ಮಳೆ, ಗಾಳಿಯ ರಭಸಕ್ಕೆ ಮುರಿದು ಬಿದ್ದಿದ್ದು ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಎಂ ಆರ್ ಪಿ ಎಲ್‌ ಗೆ ನೀರು ಸರಬರಾಜು ಮಾಡುವ ಬಂಟ್ವಾಳ ಶಂಭೂರಿನ ಡ್ಯಾಂ ಗೆ ಒಳ ಹರಿವು ಹೆಚ್ಚಾಗಿರುವುದರಿಂದ ಅಣೆಕಟ್ಟಿನಿಂದ ಗೇಟುಗಳನ್ನು ಓಪನ್ ಮಾಡಿ ನೀರನ್ನು ಹೊರಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳದ ಹಾಲಡ್ಕ, ಗೂಡಿನಬಳಿ, ಪಾಣೆಮಂಗಳೂರು, ನಂದಾವರ ಬಳಿ ಮನೆಗಳಿಗೆ ನುಗ್ಗಿದೆ. ಹಾಲಡ್ಕದಲ್ಲಿ 5 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...