Connect with us

BANTWAL

ಕರಾವಳಿಯಲ್ಲಿ ವ್ಯಾಪಕ ಮಳೆ: ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು(ಜು.5) ರಜೆ ಘೋಷಣೆ..!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಇಂದು ( ಜು.5) ಬುಧವಾರ ರಜೆ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ,

ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು,

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 – 2 4 4 2 5 9 0‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending