Saturday, August 20, 2022

ಕರಾವಳಿ, ಮಲೆನಾಡಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಮಳೆ ಸಂಭವ: ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ..!

ಬೆಂಗಳೂರು: ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆಯುತ್ತಿದ್ದಾನೆ.

ಈ ವರ್ಷದ ಮೊದಲ ಮಳೆಗೆ ದಕ್ಷಿಣ ಕನ್ನಡ ತಂಪಾಗಿದ್ದು, ಮಂಗಳೂರಿನ ಹಲವೆಡೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು.

ಇಂದು ರಾತ್ರಿ ಮತ್ತು ನಾಳೆ ಮುಂಜಾನೆ ಕೂಡ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡು, ಪುದುಚೇರಿ ಮತ್ತು ಕೇರಳದಾದ್ಯಂತ ಚದುರಿದ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 3 ದಿನಗಳಲ್ಲಿ ಕೇರಳ, ಮಾಹೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕೇರಳದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೇರಳದ ಕೊಲ್ಲಂ, ಪತ್ತನಾಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಾರ್ಚ್ 12ರವರೆಗೆ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ.

ಹೀಗಾಗಿ, ಮೀನುಗಾರರಿಗೆ ದಕ್ಷಿಣ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶಕ್ಕೆ ಹೋಗದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics