ರಾಜ್ಯದಲ್ಲಿ ನಾಳೆಯಿಂದ 2 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಅನೇಕ ಜಿಲ್ಲೆಗಳಳ್ಲಿ ಯೆಲ್ಲೋ ಅಲರ್ಟ್ ಘೊಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆಯಾಗಲಿದೆ. ನಾಳೆಯಿಂದ (ನ.5 ) 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹನಾಮಾನ ಇಲಾಖೆ ಎಚ್ಚರಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ.
ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ.
ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ನ. 5ರಿಂದ ಸಾಧಾರಣ ಮಳೆಯಾಗಲಿದೆ.