ರಾಜ್ಯದಲ್ಲಿ ಮೂರು ದಿನ ಮಳೆ ಸಂಭವ : ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!
ಮಂಗಳೂರು : ಕರಾವಳಿ ಭಾಗ ಸೇರಿದಂತೆ ರಾಜ್ಯದ ಅನೇಕ ಭಾರಿ ಮಳೆಯಾಗುವ ಸಾದ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗಲಿದೆ.
ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು, ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ನಿರೀಕ್ಷೆ ಮಾಡಲಾಗಿದೆ.
ಎಲ್ಲಾ ಭಾಗದಲ್ಲಿ ಸೆ.2 ಮತ್ತು 3ರಂದು ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಸೆಪ್ಟೆಂಬರ್ 1ರಿಂದ 3 ರ ವರೆಗೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಿವಮೊಗ್ಗ , ಹಾಸನ, ಚಾಮರಾಜನಗರ , ಮೈಸೂರು , ಮಂಡ್ಯ , ರಾಮನಗರ , ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ ಸಾಧ್ಯತೆಯಿದೆ.
ಕಳೆದ ಹತ್ತು ದಿನಗಳಿಂದ ತುಸು ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ತನ್ನ ಅಬ್ಬರ ಶುರು ಮಾಡಲಿದೆ.
ರಾಜ್ಯಾದ್ಯಂತ ಮುಂದಿನ ವಾರ ಉತ್ತಮ ಮಳೆ ನಿರೀಕ್ಷೆಯಿದೆ. ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಲಿದೆ.