Friday, August 12, 2022

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ: ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಲಕ್ಷ ದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಮಳೆ ಇನ್ನು ಕೂಡ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ನಿನ್ನೆ ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ನಿನ್ನೆ ಸಂಜೆ ಆರಂಭವಾದ ಮಳೆ ಸತತವಾಗಿ ಹಲವು ಗಂಟೆಗಳು ಗುಡುಗು, ಮಿಂಚು ಸಹಿತ ಸುರಿಯಿತು. ಇದರಿಂದಾಗಿ ಕೆಲ ತಗ್ಗು ಪ್ರದೇಶಗಳ ಮನೆಗಳು ಕೆಲವು ಅವಾಂತರವನ್ನು ಎದುರಿಸುವ ಸನ್ನಿವೇಶ ಸೃಷ್ಠಿಯಾಯಿತು.

ನೀರು ನುಗ್ಗಿ ಜನರು ಪರದಾಡುವಂತಾಯಿತು. ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತ್ತು.

ಸಿಲಿಕಾನ್ ಸಿಟಿಯ ಕಾಮಾಕ್ಯ ಚಿತ್ರಮಂದಿರದ ಸುತ್ತಮುತ್ತ 50ಕ್ಕೂ ಹೆಚ್ಚು ಮನೆಗಳಿಗೆ ತಡ ರಾತ್ರಿ ಮಳೆ ನೀರು ನುಗ್ಗಿ ಅಕ್ಕಿ, ಬೇಳೆ ಸೇರಿದಂತೆ ದಿನಬಳಕೆ ವಸ್ತುಗಳು ಹಾಳಾಗಿವೆ. ಭಾರಿ ಮಳೆಗೆ ಚರಂಡಿ ಹೊರಗಡೆ ಬಂದು ಕಾರುಗಳು ದ್ವಿಚಕ್ರ ವಾಹನಗಳು ಕೊಚ್ಚಿ ಹೋಗಿರುವುದು ಸಹ ಬೆಳಕಿಗೆ ಬಂದಿದೆ.

ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕಾಪು: ಫ್ರಿಡ್ಜ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌-ಸುಟ್ಟು ಭಸ್ಮವಾದ ಸೊತ್ತುಗಳು

ಕಾಪು: ಮನೆಯೊಂದರಲ್ಲಿ ಫ್ರಿಡ್ಜ್‌ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮಗೊಂಡ ಘಟನೆ ಇಂದು ಬೆಳಿಗ್ಗೆ ಕಾಪುವಿನ ಪೊಲಿಪುವಿನಲ್ಲಿ ಸಂಭವಿಸಿದೆ.ದಿನೇಶ್ ಪೂಜಾರಿ ಅವರ ವಸತಿ ಸಂಕೀರ್ಣದ ಮೇಲಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗುರುರಾಜ್ ಅವರು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...