Connect with us

bengaluru

ಸಿಲಿಕಾನ್‌ ಸಿಟಿಯಲ್ಲಿ ಭಾರೀ ಮಳೆ-ನೀರಿನಲ್ಲಿ ಮುಳುಗಿದ ವಾಹನಗಳು, ಪರದಾಡಿದ ಜನತೆ

Published

on

ಬೆಂಗಳೂರು: ಭಾನುವಾರ ಸಂಜೆಯಿಂದ ಸುರಿಯಲಾರಂಭಿಸಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಕೃತಕ ನೆರೆ ಮತ್ತೆ ಸೃಷ್ಟಿಯಾಗಿದೆ. ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ಕ್ಯಾಂಟೀನ್‌ಗೆ ಮಳೆ ನೀರು ನುಗ್ಗಿದೆ.

ಭಾನುವಾರ ರಾತ್ರಿ ಪೂರ್ತಿ ಮಳೆ ಸುರಿದಿದ್ದು, ಜನ ಕಂಗೆಟ್ಟಿದ್ದಾರೆ. ನಗರದ ಹಲವು ಕಡೆಗಳಲ್ಲಿ ಮಳೆಯಿಂದಾಗಿ ಭಾರೀ ಅವಾಂತರವಾಗಿದೆ.


ಇಂದಿರಾ ನಗರ, ಸರ್ಜಾಪುರ ರಸ್ತೆಯಲ್ಲಿರುವ ರೈಬೋ ಲೇಔಟ್‌, ಎಚ್‌ಎಸ್‌ಆರ್ ಲೇಔಟ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನಸಾಮಾನ್ಯರು ಪರದಾಡುತ್ತಿದ್ದಾರೆ.

ಇನ್ನು ಮಳೆಯಿಂದಾಗಿ ಮಾರತಹಳ್ಳಿ – ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲೂ ಟ್ರಾಫಿಕ್‌ ಜಾಂ ಉಂಟಾಗಿದೆ. ರಸ್ತೆಯಲ್ಲೇ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುತ್ತಿದ್ದು, ಬೆಂಗಳೂರು ತಮಕೂರು ರಸ್ತೆಯಲ್ಲೂ ಇದೇ ರೀತಿಯಲ್ಲಿ ಟ್ರಾಫಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.

ನಗರದ ಹಲವು ಕಡೆಗಳಲ್ಲಿ ಅಪಾರ್ಟ್ಮೆಂಟ್‌ಗಳಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಕಾರುಗಳು ಮಳೆ ನೀರಿನಿಂದ ಮುಳುಗಡೆಯಾದ ದೃಶ್ಯಗಳು ಕಂಡುಬರುತ್ತಿವೆ.

ಸರ್ಜಾಪುರ ರಸ್ತೆಯ ಗ್ರೀನ್‌ ವುಡ್‌ ಅಪಾರ್ಟ್ಮೆಂಟ್ ನಲ್ಲಿ ಕಾರುಗಳು ಮುಳುಗಡೆಯಾಗಿದ್ದನ್ನು ಅಲ್ಲಿನ ನಿವಾಸಿಗಳು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಹಲವು ಅಪಾರ್ಟ್ಮೆಂಟ್‌ಗಳಲ್ಲಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಮನೆಯಿಂದ ಹೊರ ಬರಲು ಸಾಧ್ಯವಾಗದೆ ಪರದಾಟ ನಡೆಸುತ್ತಿದ್ದಾರೆ.

ಶಾಂತಿನಗರದ ಬಿಎಂಟಿಸಿ ಡಿಪೋ ಒಳಗಡೆ ನೀರು ನಿಂತಿದ್ದು ಕೆರೆಯಂತಾಗಿದೆ. ಮಳೆಯಿಂದಾಗಿ ನಗರದ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮವಾಗಿ ಕಾರುಗಳು ಮುಳುಗಿದ್ದು, ರಸ್ತೆ, ಬಡವಾಣೆ ಜಲಾವೃತಗೊಂಡಿವೆ. ರಾಜ್ಯದ 18 ಜಿಲ್ಲೆಗಳಿಗೆ ಇಂದು ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ರಾಜಕಾಲುವೆ ಮತ್ತು ಇತರ ಮಳೆ ನೀರು ಹರಿಯುವ ಚರಂಡಿಗಳ ಒತ್ತುವರಿಯಾಗಿರುವುದೇ ಮಳೆ ಅನಾಹುತಕ್ಕೆ ಮುಖ್ಯ ಕಾರಣ ಎಂದು ಎಲ್ಲರೂ ಹೇಳುತ್ತಿದ್ದಾರೆ.

ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಿಬಿಎಂಪಿ ಅನುಸರಿಸಿದ ನಿಧಾನ ಕ್ರಮಗಳಿಂದಲೇ ಬೆಂಗಳೂರು ಜಲಾವೃತಗೊಂಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

bengaluru

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Published

on

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

bangalore

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

Published

on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ishwarappaishwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ

ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.

Continue Reading

bengaluru

ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

Published

on

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.

ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ : 

ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ಕನ್ನಡ ಮಾತನಾಡಿದ್ದಕ್ಕೆ ನಿಂದನೆ :

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.

ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.

ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಪೊಲೀಸರೂ ಸಹಾಯ ಮಾಡಲಿಲ್ಲ : 

ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.

ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾವು ಪಾಕಿಸ್ತಾನದಲ್ಲಿದ್ದೇವಾ? 

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.

 

ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

Continue Reading

LATEST NEWS

Trending