Monday, July 4, 2022

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರಿ ಗಾಳಿ ಮಳೆ : ಗುಜರಾತ್- ರಾಜಸ್ಥಾನ ತತ್ತರ..!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರಿ ಗಾಳಿ ಮಳೆ : ಗುಜರಾತ್- ರಾಜಸ್ಥಾನ ತತ್ತರ..!

ಅಹಮದಬಾದ್ : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಿಲ್ಲಿ, ಗುಜರಾತ್‌, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶದ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವರುಣ ಅಬ್ಬರಿಸತೊಡಗಿದ್ದಾನೆ.

ಗುಜರಾತ್‌, ರಾಜಸ್ಥಾನದಲ್ಲಿ ಕಳೆದ 5 ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಘಟನೆಗಳಿಂದ ಗುಜರಾತ್‌ನಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ಗುಜರಾತ್‌ ಶೇ.179ರಷ್ಟು ಹೆಚ್ಚುವರಿ ಮಳೆ ಕಂಡರೆ, ರಾಜಸ್ಥಾನದಲ್ಲಿ ಶೇ.33ರಷ್ಟು ಹೆಚ್ಚು ಮಳೆ ಬಿದ್ದಿದೆ. ಇನ್ನೂ 3 ದಿನಗಳ ಕಾಲ ಇಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಲ್ಲಿ ಮಾತ್ರವಲ್ಲದೇ, ಒಡಿಶಾ, ಪಶ್ಚಿಮ ಬಂಗಾಲ, ಜಾರ್ಖಂಡ್‌, ಛತ್ತೀಸ್‌ಗಢ‌, ಮಧ್ಯಪ್ರದೇಶವೂ ಭಾರೀ ಮಳೆಗೆ ಸಾಕ್ಷಿಯಾಗಲಿವೆ ಎಂದಿದೆ.

ಗುಜರಾತ್‌ನಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಲ್ಲಿವರೆಗೆ ಸುಮಾರು 1,400 ಜನರನ್ನು ಮುಳುಗಿರುವ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಲಾನಯನ ಪ್ರದೇಶಗಳಲ್ಲಿನ ಭಾರಿ ಮಳೆಯಿಂದಾಗಿ ರಾಜ್ಯದ 205 ಅಣೆಕಟ್ಟುಗಳಲ್ಲಿ 90 ತುಂಬಿದೆ, ಆದರೆ 70 ಅಣೆಕಟ್ಟುಗಳು ಅವುಗಳ ಒಟ್ಟು ಶೇಖರಣಾ ಸಾಮರ್ಥ್ಯದ ಶೇಕಡಾ 70 ಕ್ಕಿಂತಲೂ ಹೆಚ್ಚು ತಲುಪಿದೆ ಎಂದು ಜಲನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ...