Friday, August 19, 2022

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಿನ್ನೆ ನಡೆದಿದೆ.


ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ಳಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ.

ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ಸಣ್ಣ ಪುಟ್ಟ ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ. ಕೆಲವೊಂದು ದ್ವಿಚಕ್ರ ವಾಹನಗಳ ಸಹಿತ ಆಟೋ ರಿಕ್ಷಗಳು ಸ್ಥಳೀಯರ ಸಹಕಾರದಲ್ಲಿ ಈ ದಾರಿಯಿಂದಲೇ ಸಂಚಾರ ನಡೆಸಿದೆ.


ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಮದ್ಯಾಹ್ನ ವೇಳೆ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ‌.

ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರಿಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ಬಳಿಕ ನೀರಿನ ಮಟ್ಟ ಕಡಿಮೆಯಾಗಿದ್ದು ಎಂದಿನಂತೆ ವಾಹನಗಳು ಸಂಚಾರ ನಡೆಸಿದೆ.

LEAVE A REPLY

Please enter your comment!
Please enter your name here

Hot Topics

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...