Thursday, December 1, 2022

ಸೆ. 17 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಮುಂದುವರಿಕೆ : ಮೀನುಗಾರರು ಸಮುದ್ರಕ್ಕಿಳಿಯದಿರಲು ಸೂಚನೆ..!

ಸೆ. 17 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಮುಂದುವರಿಕೆ : ಮೀನುಗಾರರು ಸಮುದ್ರಕ್ಕಿಳಿಯದಿರಲು ಸೂಚನೆ..!

ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಮಳೆಯಾಗುವ ನಿರೀಕ್ಷೆ ಇದೆ. ವೇಗವಾಗಿ ಗಾಳಿಯೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಭಾನುವಾರವೂ ಮೋಡ ಕವಿದ ವಾತಾವರಣವಿತ್ತು. ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕುಸಿತವಾಗಿದೆ. ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದಿಂದ ಕಾವೇರಿ ನದಿಯಲ್ಲಿನ ಒಳಹರಿವು ಹೆಚ್ಚಾಗಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅಡಿಕೆ ಮರ ಕಡಿಯುತ್ತಿದ್ದಾಗ ತಲೆಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ...

ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಹಿಂದೂ ಮುಖಂಡ..! ಪುನೀತ್ ಅತ್ತಾವರ ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ.ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ...