Monday, May 23, 2022

ವಾಯುಭಾರ ಕುಸಿತ : ರಾಜ್ಯದ ಕರಾವಳಿಯಲ್ಲಿ ಗುಡುಗು ಸಿಡಿಲಿನ ಮಳೆಯ ಎಚ್ಚರಿಕೆ..!

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್ 3ರ ವರೆಗೆ ಸಿಡಿಲು, ಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಹಿಂಗಾರು ಮಾರುತಗಳಿಂದಾಗಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ನವೆಂಬರ್ 1 ರಂದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನವೆಂಬರ್ 2ರಂದು ನಾಳೆ ಈ ಜಿಲ್ಲೆಗಳ ಜೊತೆಗೆ ಚಾಮರಾಜನಗರ, ಮೈಸೂರು ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...