LATEST NEWS
ಶಿರಾಡಿ ಘಾಟಿ ಕುಸಿತ: ಸಾಲುಗಟ್ಟಿ ನಿಂತ ಸರಕು ವಾಹನ- ಮಡಿಕೇರಿ ರಸ್ತೆಯೂ ಬಂದ್
Published
2 years agoon
By
Adminಹಾಸನ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿ ರಸ್ತೆ ಕುಸಿತದಿಂದ ಸರಕು ಸಾಗಾಟ ವಾಹನಗಳು ಹಾಸನದಲ್ಲಿ ಸಾಲುಗಟ್ಟಿ ನಿಂತಿದೆ.
ಮಂಗಳೂರಿನ ಎನ್‌ಎಂಪಿಟಿ, ಎಂಆರ್‌ಪಿಎಲ್, ಬಂದರು ಸೇರಿದಂತೆ ಹಲವೆಡೆ ಸರಕು ಸಾಗಾಟ ಮಾಡುತ್ತಿದ್ದ ಘನ ವಾಹನಗಳು ಹಾಸನ ನಗರದ ಹೊರವಲಯ ದೇವರಾಯಪಟ್ಟಣದ ಬಳಿ ಸಾಲುಗಟ್ಟಿ ನಿಂತಿವೆ.
ಸದ್ಯ ಲಘು ವಾಹನಗಳಿಗೆ ಪರ್ಯಾಯ ಮಾರ್ಗ ತೋರಿಸಿದ್ದರೂ, ಭಾರಿ ಸರಕು ಸಾಗಣೆ ವಾಹನಗಳಿಗೆ ಯಾವ ಮಾರ್ಗದಲ್ಲಿ ಸಂಚರಿಸಬೇಕು ಎನ್ನುವ ಮಾಹಿತಿ ನೀಡದ ಪರಿಣಾಮ ಚಾಲಕರು ಕಂಗಾಲಾಗಿದ್ದಾರೆ.
ಮಡಿಕೇರಿ-ಮಂಗಳೂರು ರಸ್ತೆ ಬಂದ್
ಇತ್ತ ಮಡಿಕೇರಿಯ ಡಿ.ಸಿ ಕಚೇರಿಯ ತಡೆಗೋಡೆ ರಸ್ತೆಗೆ ಕುಸಿಯುವ ಭೀತಿ ಇರುವುದರಿಂದ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಡಿಕೇರಿ ತಡೆಗೋಡೆ ಕುಸಿತ
ಮುನ್ನೆಚ್ಚರಿಕೆಯಾಗಿ ಮಡಿಕೇರಿಯಿಂದ ಮಂಗಳೂರಿಗೆ ತೆರಳುವವರು ಮತ್ತು ಮಂಗಳೂರಿನಿಂದ ಮಡಿಕೇರಿಗೆ ಹೋಗುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.
ಮಂಗಳೂರು/ಪ್ರಯಾಗ್ ರಾಜ್ : ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಮಹಾ ಕುಂಭಮೇಳ ಆರಂಭಗೊಂಡಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ.
ಈ ಬಾರಿಯ ಪ್ರಯಾಗರಾಜ್ ಮಹಾಕುಂಭ ಮೇಳ ಕನ್ನಡಿಗನ ಸಾರಥ್ಯದಲ್ಲಿ ನಡೆಯುತ್ತಿದೆ. ಮಹಾಕುಂಭ ಮೇಳದ ಮೇಲಾಧಿಕಾರಿಯಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕನ್ನಡಿಗ ಐಎಎಸ್ ಅಧಿಕಾರಿಯನ್ನೇ ನೇಮಕ ಮಾಡಿದ್ದಾರೆ. ಬೆಂಗಳೂರು ಮೂಲದ ವಿಜಯ್ ಕಿರಣ್ ಆನಂದ್ ಅವರು ಮಹಾಕುಂಭಮೇಳದ ಸಾರಥ್ಯವಹಿಸಿದ್ದಾರೆ.
ಇದನ್ನೂ ಓದಿ: ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?
ವಿಜಯ್ ಕಿರಣ್ ಆನಂದ್ ಈ ಹಿಂದೆ ಗೋರಖ್ ಪುರ ಜಿಲ್ಲಾಧಿಕಾರಿಯಾಗಿದ್ದರು. ಈ ವೇಳೆ ವಿಜಯ್ ಕಿರಣ್ ದಕ್ಷತೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಹತ್ತಿರದಿಂದ ನೋಡಿದ್ದರು. ಹೀಗಾಗಿ ಈಗ ಪ್ರಯಾಗರಾಜ್ ಜಿಲ್ಲಾಧಿಕಾರಿಯಾಗಿ ಅವರನ್ನೇ ನೇಮಿಸಿ ಮಹಾಕುಂಭ ಮೇಳದ ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ವಿಜಯ್ ಕಿರಣ್ ಆನಂದ್ ಅವರನ್ನು ಮಹಾಕುಂಭಮೇಳದ ಮೇಲಾಧಿಕಾರಿಯಾಗಿ ನೇಮಕ ಮಾಡಿದ್ದಾರೆ.
ಈ ಹಿಂದೆ 2021ರ ಹರಿದ್ವಾರದ ಕುಂಭ ಮೇಳಕ್ಕೆ ಮೇಲಾಧಿಕಾರಿಯಾಗಿ ಕನ್ನಡಿಗ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರನ್ನು ನೇಮಿಸಲಾಗಿತ್ತು. ಇದೀಗ ಮತ್ತೊಬ್ಬ ಕನ್ನಡಿಗರ ನೇತೃತ್ವದಲ್ಲಿ ಪ್ರಯಾಗರಾಜ್ ನ ಮಹಾ ಕುಂಭಮೇಳ ನಡೆಯುತ್ತಿದೆ.
LATEST NEWS
ರಾಮೇಶ್ವರಂ ಕೆಫೆ ರೀತಿ 6 ಗಣ್ಯರ ಮನೆ ಸ್ಫೋ*ಟಿಸುವುದಾಗಿ ಬೆದ*ರಿಕೆ ಕರೆ
Published
12 hours agoon
13/01/2025By
NEWS DESK4ಮಂಗಳೂರು/ಬೆಂಗಳೂರು : ರಾಮೇಶ್ವರಂ ಕೆಫೆ ರೀತಿ ಬಾಂ*ಬ್ ಬ್ಲಾ*ಸ್ಟ್ ಮಾಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿರುವ ಬಗ್ಗೆ ವರದಿಯಾಗಿದೆ. ಗಣರಾಜ್ಯೋತ್ಸವದಂದು ಬೆಂಗಳೂರಿನ ಆರು ಜನ ಗಣ್ಯರ ಮನೆ ಸ್ಫೋ*ಟಿಸುವುದಾಗಿ ಬೆ*ದರಿಕೆ ಬಂದಿದೆ. ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಆಗಂತುಕ ಬೆ*ದರಿಕೆ ಹಾಕಿದ್ದಾನೆ.
ಸದ್ಯ ಬಾಂ*ಬ್ ಬೆ*ದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜ.9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂ*ಬ್ ಬ್ಲಾ*ಸ್ಟ್ ಮಾಡುವುದಾಗಿ ಹುಸಿ ಬಾಂ*ಬ್ ಎಂದು ಬೆ*ದರಿಕೆ ಹಾಕಿದ್ದಾನೆ. ಈ ಬಗ್ಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಿಚಿತ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ 6 ಜನರ ಹೆಸರು, ವಿಳಾಸವನ್ನು ಆಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟ ಪೊಲೀಸರು ಶಂಕಿತ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತರ ನಿಯಂತ್ರಣ ಕೊಠಡಿಗೆ ಬಂದ ಹುಸಿ ಬಾಂ*ಬ್ ಬೆದ*ರಿಕೆ ಕರೆ ಆತಂಕ ಹುಟ್ಟು ಹಾಕಿದೆ. ಬೆಂಗಳೂರಿನಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲು ಇಲಾಖೆ ಸಿದ್ಧತೆ ನಡೆಸಿದೆ.
BIG BOSS
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
Published
13 hours agoon
13/01/2025By
NEWS DESK2ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಚೈತ್ರಾ ಕುಂದಾಪುರ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾತಿನಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಚೈತ್ರಾ ಕುಂದಾಪುರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.
ಚೈತ್ರಾ ಕುಂದಾಪುರ ಅವರು ಟಾಸ್ಕ್‌ಗಳಲ್ಲಿ ಅಷ್ಟಾಗಿ ಮಿಂಚಿರಲಿಲ್ಲ. ಆದರೆ ಮಾತು, ವಾದ, ವಾಗ್ವಾದಗಳಿಂದಲೇ ಬಿಗ್ ಬಾಸ್ ವೀಕ್ಷಕರ ಗಮನಸೆಳೆದಿದ್ದರು. ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ಚೈತ್ರಾ ಕುಂದಾಪುರ ನೇರವಾಗಿ ಮಾತನಾಡುತ್ತಿದ್ದರು. ತಮ್ಮ ಮಾತಿನಿಂದಲೇ ಹಲವು ಬಾರಿ ಮನೆಯವರ ಕೆಂಗಣ್ಣಿಗೆ ಸಹ ಚೈತ್ರಾ ಗುರಿಯಾಗಿದ್ದರು.
ಚೈತ್ರಾ ಕುಂದಾಪುರ ಎಲಿಮಿನೇಟ್ ಆದ ವಿಚಾರ ತಿಳಿಯುತ್ತಿದ್ದಂತೆ ಅವರು ಬಿಗ್ ಬಾಸ್ ನಿಂದ ಪಡೆದ ಸಂಭಾವನೆ ಸುದ್ದಿ ವೈರಲ್ ಆಗುತ್ತಿದೆ. ಚೈತ್ರಾ ಕುಂದಾಪುರ ವಾರಕ್ಕೆ 1 ಲಕ್ಷದವರೆಗೆ ಸಂಭಾವನೆ ಪಡೆಯುತ್ತಿದ್ದರು ಎಂದು ಕೆಲವು ವರದಿಗಳಲ್ಲಿ ಹೇಳಲಾಗಿದೆ. ಈ ಪ್ರಕಾರ 15 ವಾರಗಳಿಗೆ ಒಟ್ಟು 15,00,000 ರೂಪಾಯಿ ಸಂಭಾವನೆ ಪಡೆದಂತಾಗುತ್ತದೆ. ಇದಲ್ಲದೇ ಚೈತ್ರಾ ಕುಂದಾಪುರ ಅವರಿಗೆ 1,50,000 ರೂಪಾಯಿ ಸ್ಪಾನ್ಸರ್ ಕಡೆಯಿಂದ ಬಹುಮಾನದ ಮೊತ್ತ ಸಿಗಲಿದೆ. ಜೊತೆಗೆ 50,000 ದ ಗಿಫ್ಟ್ ವೋಚರ್ ಸಹ ಸಿಗಲಿದೆ.
ಇದೆಲ್ಲವನ್ನೂ ಒಟ್ಟುಗೂಡಿಸಿದರೆ ಚೈತ್ರಾ ಕುಂದಾಪುರ ಬಿಗ್‌ಬಾಸ್ ನಿಂದ ಒಟ್ಟು 16,50,000 ರೂಪಾಯಿ ಹಣ ಪಡೆದಂತಾಗುವುದು. (ಇದು ವರದಿಗಳನ್ನು ಮತ್ತು ವೈರಲ್ ಸಂಗತಿಗಳನ್ನು ಆಧರಿಸಿ ಬರೆದ ಸುದ್ದಿಯಾಗಿದೆ. ನಿಖರ ಮಾಹಿತಿಯಲ್ಲ.)
LATEST NEWS
ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹ*ಲ್ಲೆ; ನೌಕಾನೆಲೆ ಸಿಬ್ಬಂದಿ ವಿರುದ್ಧ ಪ್ರತಿಭಟನೆ
ವಿದುರನ ಈ ಮೂರು ನಿಯಮಗಳನ್ನು ಪಾಲಿಸಿದರೆ ಜೀವನದಲ್ಲಿ ಯಶಸ್ಸು ಖಂಡಿತ
ಯಾರದ್ದೋ ಕೊ*ಲೆಗೆ ಸಂಚು; ಬ*ಲಿಯಾದವರು ಮತ್ಯಾರೋ!!
2,700 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಝಡ್ – ಮೋರ್ಹ್ ಸುರಂಗ ಉದ್ಘಾಟಿಸಿದ ಪ್ರಧಾನಿ ಮೋದಿ
ತಿರುಪತಿಯಲ್ಲಿ ಮತ್ತೊಂದು ಅವಘಡ; ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ !
BBK 11: ರಜತ್ಗೆ ಟಾರ್ಗೆಟ್- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್ ಫಿಕ್ಸಿಂಗ್
Trending
- BIG BOSS3 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS4 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM6 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- FILM5 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ