Wednesday, May 18, 2022

ಛತ್ತೀಸ್‍ಗಢದಲ್ಲಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲೆಟ್ ಸಾವು

ಛತ್ತೀಸ್‍ಗಢ: ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್‍ಗಢದ ರಾಯ್ಪುರ್‌ನ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಘಟನೆಯಲ್ಲಿ ಪೈಲೆಟ್ ಗಳಾದ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ.


ಛತ್ತೀಸ್‍ಗಢ ಮನ ಪೊಲೀಸ್ ಠಾಣೆ ವ್ಯಾಪ್ತಿಯ ರಾಯ್ಪುರ್‌ ನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದ ಅಭ್ಯಾಸ ನಡೆಸಲಾಗುತ್ತಿತ್ತು.

ಬಳಿಕ ಅಭ್ಯಾಸ ಮುಗಿಸಿ ಪೈಲಟ್‍ಗಳು ಹೆಲಿಕಾಪ್ಟರ್‌ನ್ನು ಇಳಿಸಲು ಯತ್ನಿಸಿದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಕರಿರಲಿಲ್ಲ.

ಅಪಘಾತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.ಈ ಕುರಿತು ನಿಖರ ಕಾರಣವನ್ನು ಖಚಿತ ಪಡಿಸಿಕೊಳ್ಳಲು ಡೈರಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಮತ್ತು ಛತ್ತೀಸ್‍ಗಢ ಸರ್ಕಾರವು ತಾಂತ್ರಿಕ ತನಿಖೆಯನ್ನು ಕೈಗೊಂಡಿದೆ.


ಇನ್ನು ಹೆಲಿಕಾಪ್ಟರ್ ದುರಂತದ ಬಗ್ಗೆ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...