Connect with us

BELTHANGADY

ಹೇಮಾವತಿ ವಿ.ಹೆಗ್ಗಡೆ ಬರೆದ ‘ಗೆಳತಿ’ ಮಗಳಿಗೊಂದು ಪತ್ರ ಕೃತಿ ಲೋಕಾರ್ಪಣೆ

Published

on

ಧರ್ಮಸ್ಥಳ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಕ್ಷೇತ್ರದ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆ ಅಮ್ಮನವರ ಮಹಿಳಾಪರ ನಿಲುವುಗಳ ವಿಚಾರಗೋಷ್ಠಿ ಮತ್ತು ಮಾತೃಶ್ರೀಯವರು ಬರೆದ ಗೆಳತಿ ಮಗಳಿಗೊಂದು ಪತ್ರ’ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಕ್ಷೇತ್ರದ ಮಹೋತ್ಸವ ಸಭಾಭವನದಲ್ಲಿ ನಡೆಯಿತು.


ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್. ಪೈ ಕೃತಿ ಬಿಡುಗಡೆಗೊಳಿಸಿದರು.

ಬಳಿಕ ಕೃತಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಅವರು “ಒಬ್ಬ ಮಹಿಳೆಯಾಗಿ ಮಾತೃಶ್ರೀ ಹೇಮಾವತಿ ಅಮ್ಮನ ನಡೆದು ಬಂದ ಹಾದಿ, ಸಾಧಿಸಿದ ಸಾಧನೆ ಎಲ್ಲರಿಗೂ ಮಾದರಿ. ಅವರ ದಾರಿಯಲ್ಲೆ ಮುನ್ನಡೆಯರಿ ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು “ಈಗ ಕಾಲ ಬದಲಾಗಿದೆ.

ಮಹಿಳೆಯೂ ಕೂಡ ಪುರುಷನಂತೆಯೇ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಅನ್ನುವುದನ್ನು ತೋರಿಸಿಕೊಟ್ಟಿದ್ದಾಳೆ. ದೇಶದ ಅನೇಕ ಉನ್ನತ ಹುದ್ದೆಗಳನ್ನು ಮಹಿಳೆ ಅಲಂಕರಿಸಿರುವುದೇ ಅದಕ್ಕೆ ಸಾಕ್ಷಿ” ಎಂದರು.

ಕೃತಿ ರಚನೆಕಾರರಾದ ಮಾತೃಶ್ರೀ ಹೇಮಾವತಿ ಅಮ್ಮನವರು ಮಾತನಾಡಿ ತನ್ನ ಸಾಧನೆಗೆ ಹಾಗೂ ತನ್ನ ಕೃತಿ ರಚನೆಗೆ ಬೆನ್ನಲುಬಾಗಿ ನಿಂತು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಲ್‌.ಹೆಚ್‌. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending