Connect with us

    LATEST NEWS

    ಹಾಯ್ ಬೆಂಗಳೂರು ಸಂಸ್ಥಾಪಕ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ..!

    Published

    on

    ಹಾಯ್ ಬೆಂಗಳೂರು ಸಂಸ್ಥಾಪಕ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ..!

    ಬೆಂಗಳೂರು : ಹಾಯ್ ಬೆಂಗಳೂರು ವಾರಪತ್ರಿಕೆ ಸಂಸ್ಥಾಪಕರು ,ಹಿರಿಯ ಪತ್ರಕರ್ತ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

    1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದರು. ಬದುಕು ಕಟ್ಟಿಕೊಳ್ಳಲು ಶುರುಮಾಡಿದ ರವಿ ಬೆಳೆಗೆರೆ ಅವರು ಮೊದಲು ಸೇರಿದ್ದು ಬೆಂಗಳೂರಿನ ರಾಜಾಜನಗರದಲ್ಲಿದ್ದ ‘ಅಭಿಮಾನ’ ಪತ್ರಿಕೆಗೆ.

    ನಂತರ ಹಾಯ್ ಬೆಂಗಳೂರ್ ವಾರಪತ್ರಿಕೆ ಹಾಗೂ ‘ಓ ಮನಸೇ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದರು. ಜೊತೆಗೆ ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು.

    ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆ ಯ ಸಂಸ್ಥಾಪಕರು, ಹಾಯ್ ಬೆಂಗಳೂರ್’ ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.

    ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಜನಪ್ರಿಯ ಕೃತಿಗಳನ್ನು ರಚಿಸಿದ್ದರು.

    ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ರವಿ ಬೆಳೆಗೆರೆ ಅವರು ಸ್ಥಾಪಿಸಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    # ಪತ್ರಿಕೋದ್ಯಮದಲ್ಲಿ ರವಿ ಬೆಳೆಗೆರೆ :
    ಪತ್ರಕರ್ತನ ವೃತ್ತಿಯಲ್ಲಿ ಹೇಗಿರಬೇಕು ಮತ್ತು ಅದರ ಅಕ್ಷರಗಳು ಹೇಗೆ ಇರಬೇಕು ಎಂಬುದರ ಬಗ್ಗೆ ತಿಳಿಸಿದ್ದು ರವಿಬೆಳೆಗೆರೆ. ಹೊಸ ಯುಗದ ಪತ್ರಕರ್ತರಿಗೆ ಮಾಧ್ಯಮ ಆಕರ್ಷಿಸಿದ್ದು ರವಿ ಅವರ ಬರಹ.

    ರವಿ ಬೆಳಗೆರೆ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಾಗ ಅದು ರಾಜ್ ಕುಮಾರ್ ರಸ್ತೆಯಲ್ಲಿ ಇದ್ದರು. ಬದುಕು ಕಟ್ಟಿಕೊಳ್ಳಲು ಶುರುಮಾಡಿದ ರವಿ ಬೆಳೆಗೆರೆ ಅವರು ಮೊದಲು ಸೇರಿದ್ದು ಅಭಿಮಾನ ಪತ್ರಿಕೆಗೆ. ಇಲ್ಲಿ ಅವರು ತಮ್ಮ ವೃತ್ತಿ ನೈಪುಣ್ಯತೆಯನ್ನು ಪ್ರದರ್ಶಿಸಿ ಮುಂದೆ ಅವರು ಹಾಯ್ ಬೆಂಗಳೂರ್ ಎಂಬ ವಾರಪತ್ರಿಕೆಯನ್ನು ಶುರುಮಾಡಿ ಪತ್ರಿಕಾ ರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದರು.

    ನಂತರ ದೃಶ್ಯಮಾಧ್ಯಮಗಳಲ್ಲಿ ಅಪರಾಧ ವರದಿಗಾರಿಕೆ ಹಾಗೂ ಅದರ ಹಿನ್ನೆಲೆ ಧ್ವನಿಯನ್ನು ನೀಡುತ್ತಾ ಹಲವಾರು ಪ್ರಕರಣಗಳನ್ನು ಕೂಡ ಬರೆದು ಎಲ್ಲರಿಗೂ ಅವರು ಸದಾ ಅಚ್ಚರಿಯ ವ್ಯಕ್ತಿಯಾಗಿ ಕಾಣುತ್ತಿದ್ದರು.

    ತಾನು ಹಿಂದೆ ಅನುಭವಿಸಿದ ಕಷ್ಟ ಹಾಗೂ ನಡೆದುಬಂದ ದಾರಿಯನ್ನು ಸದಾ ಸ್ಮರಿಸುವ ಅವರು ತಮ್ಮ ಅಭಿಮಾನ ಪತ್ರಿಕೆಯಲ್ಲಿ ಕಳೆದ ದಿನಗಳು ಹಾಗೂ ಟಿ ವೆಂಕಟೇಶ್ ಅವರ ಬಗ್ಗೆ ಇದ್ದ ಅಪಾರ ಅಭಿಮಾನವನ್ನು ತಮ್ಮ ಅಕ್ಷರದಲ್ಲಿ ಆಗಾಗ ಬರೆಯುತ್ತಿದ್ದರು ನೆನೆಯುತ್ತಿದ್ದರು ಹಲವರ ಬಳಿ ಹೇಳುತ್ತಿದ್ದರು.

    ರವಿ ಬೆಳಗರೆ ನಿಧನಕ್ಕೆ ಮುಖ್ಯಮಂತ್ರಿಯಾದಿಯಾಗಿ, ಪತ್ರವಲಯ, ಸಮಾಜದ ಧುರೀಣರು ಸಂತಾಪ ವ್ಯಕ್ತಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಅ*ಪಘಾ*ತದಲ್ಲಿ ಗಾ*ಯಗೊಂಡವರನ್ನು ರಕ್ಷಿಸಿದ್ರೆ ಸಿಗುತ್ತೆ ಸ್ಪೆಶಲ್ ಕ್ಯಾಶ್ ಪ್ರೈಸ್

    Published

    on

    ಮಂಗಳೂರು/ನಾಗಪುರ : ಅ*ಪಘಾ*ತದಲ್ಲಿ ಗಾ*ಯಗೊಂಡವರಿಗೆ ಸಹಾಯ ಮಾಡುವ ಪರೋಪಕಾರಿಗಳಿಗೆ ರೂ.25 ಸಾವಿರವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

    ನಾಗಪುರದಲ್ಲಿ ನಡೆದ ರಸ್ತೆ ಸುರಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ , “ಅ*ಪಘಾ*ತವಾದಾಗ ಮೊದಲ 1 ಗಂಟೆ ನಿರ್ಣಾಯಕವಾಗಿದ್ದು, ಆ ಅವಧಿಯಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಈಗ ನೀಡುತ್ತಿರುವ ಸಾವಿರ ರೂ.ಬಹುಮಾನ ಸಾಲುತ್ತಿಲ್ಲ. ಹೀಗಾಗಿ ಅವರಿಗೆ 25 ಸಾವಿರ ರೂ. ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೇಂದ್ರ ಸರಕಾರವು, ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ 7 ದಿನಗಳವರೆಗೆ 1.5 ಲಕ್ಷರೂ. ವರೆಗಿನ ಆಸ್ಪತ್ರೆ ವೆಚ್ಚವನ್ನು ಸಹ ಭರಿಸಲಿದೆ. ಇದು ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡರೂ ಅನ್ವಯಿಸುತ್ತದೆ” ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

    ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವವರಿಗೆ ಬಹುಮಾನ ನೀಡುವ ಯೋಜನೆಯ ಪ್ರಕಾರ, ಮಾರಣಾಂತಿಕ ಅಪಘಾತಕ್ಕೊಳಗಾದವರ ಜೀವವನ್ನು ತಕ್ಷಣದ ಸಹಾಯವನ್ನು ಒದಗಿಸುವ ಮೂಲಕ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಗೋಲ್ಡನ್ ಅವರ್ (ಅ*ಪಘಾ*ತದ ನಂತರದ ಮೊದಲ ಗಂಟೆ) ಒಳಗೆ ಆಸ್ಪತ್ರೆಗೆ ಸಾಗಿಸುವ ಮೂಲಕ ಉಳಿಸುವ ಜನರಿಗೆ ಬಹುಮಾನ ನೀಡಲಾಗುತ್ತದೆ.

    Continue Reading

    LATEST NEWS

    ಹೊಸ ದಾಖಲೆ ಬರೆದ ಸ್ಮೃತಿ ಮಂದಾನಾ

    Published

    on

    ಮಂಗಳೂರು/ನವದೆಹಲಿ : ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹಾಗೂ ಅನುಭವಿ ಆರಂಭ ಆಟಗಾರ್ತಿ ಸ್ಮೃತಿ ಮಂದಾನಾ ಅವರು ಐರ್ಲೆಂಡ್ ವಿರುದ್ದ ಶತಕ ದಾಖಲಿಸುವ ಮೂಲಕ ಏಕದಿನ ಪಂದ್ಯಗಳಲ್ಲಿ ವೇಗದ ಶತಕದ ಹೊಸ ದಾಖಲೆ ಬರೆದರು.

    ಬುಧವಾರ ರಾಜ್ ಕೋಟ್ ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಐರ್ಲೆಂಡ್ ವಿರುದ್ದ ಈ ಸಾಧನೆ ಮಾಡಿದರು. ಈ ಹಿಂದೆ ಭಾರತದಲ್ಲಿ ವೇಗದ ಶತಕ ದಾಖಲಿಸಿದ ಕೀರ್ತಿ ಹರ್ಮನ್ ಪ್ರೀತ್ ಕೌರ್ ಅವರ ಹೆಸರಿನಲ್ಲಿತ್ತು. ಮಂದಾನ ಈ ದಾಖಲೆಯನ್ನು ಮುರಿದರು. ಏಕದಿನ ಪಂದ್ಯಗಳಲ್ಲಿ ಮಂದಾನ 10 ಶತಕಗಳನ್ನು ಸಿಡಿಸಿದ್ದಾರೆ.

    ಇದನ್ನೂ ಓದಿ: ಫಿನಾಲೆಗೆ ಡೇಟ್‌ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?

    ಹರ್ಮನ್ ಪ್ರೀತ್ ಕೌರ್ ಅವರ ದಕ್ಷಿಣ ಆಫ್ರಿಕಾ ವಿರುದ್ದ 87 ಎಸೆತಗಳಲ್ಲಿ ಶತಕ ಸಿಡಿಸಿದ್ದು ಹಿಂದಿನ ದಾಖಲೆಯಾಗಿತ್ತು. ಮಂದಾನಾ 70 ಎಸೆತಗಳಲ್ಲಿ ಶತಕ ಸಿಡಿಸಿ ಕೌರ್ ದಾಖಲೆ ಮುರಿದರು.

    ಮಹಿಳಾ ಏಕದಿನ ಪಂದ್ಯಗಳಲ್ಲಿ 15 ಶತಕಗಳನ್ನು ಸಿಡಿಸಿರುವ ಆಸ್ಟ್ರೇಲಿಯಾದ ಮೇಗ್ ಲ್ಯಾನಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ಸ್ಯೂಜಿಲ್ಯಾಂಡ್ ನ ಬೇಟ್ಸ್ 13 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ನ ಟ್ಯಾಮಿ ಹಾಗೂ ಭಾರತದ ಮಂದಾನಾ ತಲಾ 10 ಶತಕಗಳನ್ನು ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

     

     

    Continue Reading

    LATEST NEWS

    ಮೈಕ್ ಪರ್ಮಿಷನ್ ವಿಚಾರವಾಗಿ ಉಡುಪಿಯ ಯಕ್ಷಗಾನದಲ್ಲಿ ಹೈಡ್ರಾಮ

    Published

    on

    ಉಡುಪಿ : ಯಕ್ಷಗಾನ ಎಂಬುವುದು ಕರ್ನಾಟಕದ ಪ್ರಸಿದ್ಧ ಆರಾಧನಾ ಕಲೆಗಳಲ್ಲಿ ಒಂದು. ಆದರೆ ಈಗ ಅದಕ್ಕೆ ಬ್ರೇಕ್‌ ಕಾಟ ಶುರುವಾಗಿದೆ. ‘ಮೈಕ್‌ಗೆ ಅನುಮತಿ ಪಡೆದಿಲ್ಲ’ ಎಂಬ ಕಾರಣಕ್ಕೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿ ಶಿರ್ಲಾಲುವಿನಲ್ಲಿ ಘಟನೆ ನಡೆದಿದೆ. ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಆಯೋಜನೆಗೊಂಡಿದ್ದ ಪ್ರದರ್ಶನದಲ್ಲಿ ಪೊಲೀಸರು ಈ ರೂಲ್ಸ್‌ ಜಾರಿಗೆ ಮುಂದಾಗಿದ್ದಾರೆ.

    ಅಜೆಕಾರು ಉಪನಿರೀಕ್ಷಕ ಶುಭಕರ್‌ ಅವರಿಂದ ರಾತ್ರಿ 10ರ ನಂತರ ಯಕ್ಷಗಾನ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತವಾಗಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಲಾಗಿದೆ. ಅಲ್ಲದೆ, ಆಯೋಜಕರನ್ನು ಅರೆಸ್ಟ್ ಮಾಡಲು ಕೂಡ ಪೊಲೀಸರು ಮುಂದಾಗಿದ್ದಾರೆ. ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗಲೇ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ವೇಳೆ ಕಿಡಿಕಾರಿದ ಗ್ರಾಮಸ್ಥರು, ಇಡೀ ಗ್ರಾಮದ ಜನರನ್ನು ಅರೆಸ್ಟ್‌ ಮಾಡಿ ಎಂದು ಹೈಡ್ರಾಮಾ ನಡೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

    ಎಫ್ಐಆರ್ ತೋರಿಸುವಂತೆ ದೂರು ದಾಖಲಾದ ಬಗ್ಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗ್ರಾಮಸ್ಥರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಪೊಲೀಸರು ಸ್ಥಳದಿಂದ ತೆರಳಿದ್ದಾರೆ. ಜನವರಿ 10 ರಂದು ಪರವಾನಿಗೆಗೆ ಪಿಡಿಒ ಬಳಿ ಆಯೋಜಕರು ತೆರಳಿದ್ದು ವೇಳೆ ಮೂರು ದಿನಗಳ ರಜೆಯ ಕಾರಣಕ್ಕೆ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ಹೋಗಿದ್ದರು.  ಪಂಚಾಯತ್ ಅನುಮತಿ ತರುವಂತೆ ಪೊಲೀಸರ ತಾಕಿತು ಮಾಡಿದ್ದಾರೆ. ಈ ಘಟನೆಗೆ ಸಂಬಧಪಟ್ಟಂತೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮಿ ಸೌಂಡ್ಸ್ ಮುಖ್ಯಸ್ಥ ಅಪ್ಪು ವಿರುದ್ಧವೂ ಕೇಸ್‌ ಹಾಕಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ .ಅರುಣ್ ಮುಂದಾಗಿದ್ದಾರೆ. ಆದೇಶ ಪಾಲಿಸದಿದ್ದರೆ ಆಯಾ ಠಾಣಾಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ. ಇದರಿಂದಾಗಿ ಪೊಲೀಸರಿಗೆ ಯಕ್ಷಗಾನದ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

    Continue Reading

    LATEST NEWS

    Trending