Connect with us

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಗೆ ಅ.19 ರವರೆಗೆ ಹೈ ಅಲರ್ಟ್: ಮೀನುಗಾರಿಕೆಗೆ ತೆರಳದಂತೆ ಡಿಸಿ ಸೂಚನೆ

    Published

    on

    ಮಂಗಳೂರು: ಒಂದು ಕಡೆಯಲ್ಲಿ ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ಅಲ್ಲದೇ ಇನ್ನು ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ವಾಯುಭಾರ ಕುಸಿತದಿಂದ ಮಳೆ ಹೆಚ್ಚಳವಿದೆ ಎನ್ನುವ ಮಾಹಿತಿಯನ್ನು ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ.

    ಅ.19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ ಹಾಗೂ ಸಮುದ್ರದ ಅಲೆಗಳ ಅಬ್ಬರ ಹೆಚ್ಚಳವಾಗುವ ಸಾಧ್ಯತೆಯಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ನೀರು ಮತ್ತು ತಗ್ಗು ಪ್ರದೇಶದಲ್ಲಿ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

    ಮಂಗಳವಾರ ನಗರದ ಕೆಲವು ಭಾಗದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ನಿರಂತರವಾಗಿ ತುಂತುರು ಮಳೆ ಜಿಲ್ಲೆಯ ನಾನಾ ಭಾಗದಲ್ಲಿ ದಿನವಿಡೀ ಕಾಣಿಸಿಕೊಂಡಿದೆ. ಇನ್ನೂ ನಾಲ್ಕು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending