Connect with us

    LATEST NEWS

    ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್​ ಮಂಟಪ, ಗಣಪನೇ ಜಡ್ಜ್

    Published

    on

    ಕರ್ನಾಟಕದಲ್ಲಿ ಗಣೇಶ ಅಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಂದರವಾದ ಸೆಟ್​​ಗಳನ್ನು ಹಾಕಿ ಗಣೇಶನನ್ನು ಕೂರಿಸಲಾಗಿದೆ. ಕರ್ನಾಟಕ ಗಡಿಭಾಗ ಹೊಸೂರಿನಲ್ಲಿ ಹೈಕೋರ್ಟ್​ ಸೆಟ್​ ಹಾಕಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.

    ಹೊಸೂರಿನ ಶ್ರೀನಗರದಲ್ಲಿ ಹೈಕೋರ್ಟ್ ಮಾದರಿಯ ಸೆಟ್ ಹಾಕಲಾಗಿದೆ. ಹೈಕೋರ್ಟ್​ ಆವರಣದಲ್ಲಿ ಮಹಾತ್ಮ ಗಾಂಧಿ ಮೂರ್ತಿಯನ್ನು ನಿಲ್ಲಿಸಲಾಗಿದೆ. ಮತ್ತು ಪ್ಲೇವುಡ್​ನಿಂದ ತಯಾರಿಸಿದ ಪೊಲೀಸ್ ಜೀಪ್​​ನನ್ನು​ ಪಾರ್ಕ್​ ಮಾಡಲಾಗಿದೆ.

    ಹೈಕೋರ್ಟ್​​ನಲ್ಲಿ ಜಡ್ಜ್, ಗುಮಾಸ್ತ, ಕ್ಲರ್ಕ್, ವಕೀಲರು, ಪೋಲೀಸರು ಎಲ್ಲವೂ ಗಣಪನೇ ಆಗಿದ್ದಾರೆ. ಹೈಕೋರ್ಟ್​ ಕಟಕಟೆಯಲ್ಲಿ ಆರೋಪಿಯಾಗಿ ಇಲಿಯನ್ನ ನಿಲ್ಲಿಸಲಾಗಿದೆ. ಶ್ರೀನಗರ ಯುವಕರ ತಂಡ ಒಟ್ಟು 16ಕ್ಕೂ ಹೆಚ್ಚು ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಿದೆ.

    ಬರೊಬ್ಬರಿ ಏಳು ಲಕ್ಷ ರೂಪಾಯಿ ಖರ್ಚು ಮಾಡಿ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಲಾಗಿದೆ. ಜಿಗಣಿಯ ಉದಯ್ ಕುಮಾರ್ ತಂಡದಿಂದ ಹೈಕೋರ್ಟ್ ಮಾದರಿ ಸೆಟ್ ನಿರ್ಮಾಣ ಮಾಡಿದೆ. ಇಪ್ಪತ್ತೈದು ದಿನದಲ್ಲಿ ಹೈಕೋರ್ಟ್ ಸೆಟ್ ನಿರ್ಮಾಣ ಮಾಡಲಾಗಿದೆ. ​ಇದೇ ಶ್ರೀನಗರದಲ್ಲಿ ಕಳೆದ ವರ್ಷ ಪೊಲೀಸ್ ಠಾಣೆ ಸೆಟ್​ ಹಾಕಲಾಗಿತ್ತು.

    ಹೈಕೋರ್ಟ್​​ ಮಾದರಿ ಸೆಟ್​​ ಅನ್ನು ನೋಡಲು ಹೊಸೂರು, ಬೆಂಗಳೂರು ಸೇರಿದಂತೆ ನಾನಾ ಭಾಗಗಳಿಂದ ಜನರು ಬರುತ್ತಿದ್ದಾರೆ. ಸೆಟ್​ ನಿರ್ಮಾಣ ಮಾಡಿದ ಕಲಾವಿದರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    Baindooru

    ಮಾರ್ಚ್​ 14 ರಿಂದ ಐಪಿಎಲ್ ಆರಂಭ

    Published

    on

    ಮುಂಬಯಿ: 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್‌ಪಿಎನ್‌ ಟಿವಿ ವಾಹಿನಿಗೆ ಸೇರಿದ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಎಂಬ ವೆಬ್‌ಸೈಟ್ ಐಪಿಎಲ್ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

    ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್ 14ರಿಂದ ಆರಂಭವಾಗಲಿದ್ದು, ಮೇ 25ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಇದರ ಜೊತೆಗೆ ಮುಂದಿನ ಎರಡು ಆವೃತ್ತಿಗಳ ವೇಳಾಪಟ್ಟಿಯ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, 2026ರಲ್ಲಿ ಐಪಿಎಲ್ ಟೂರ್ನಿ ಮಾರ್ಚ್ 15 ರಿಂದ ಮೇ 31ರವರೆಗೆ ನಡೆದರೆ, 2027ರ ಐಪಿಎಲ್ ಮಾರ್ಚ್ 14ರಿಂದ ಮೇ 30ರವರೆಗೆ ನಡೆಯಲ್ಲಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲ ಫ್ರಾಂಚೈಸಿಗಳಿಗೆ ಬಿಸಿಸಿಐ, ಇ-ಮೇಲ್ ಮುಖಾಂತರ ವೇಳಾಪಟ್ಟಿ ರವಾವಿಸಿದೆ. ಮುಂದಿನ ಮೂರು ಆವೃತ್ತಿಗಳ ಆರಂಭ ಮತ್ತು ಅಂತ್ಯದ ಬಗ್ಗೆ ಮಾತ್ರ ಮಾಹಿತಿ ಹೊರಬಿದ್ದಿದ್ದು, ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ. ಕಳೆದ ಮೂರು ಆವೃತ್ತಿಗಳಂತೆ ಮುಂದಿನ ಆವೃತ್ತಿಯಲ್ಲೂ 74 ಪಂದ್ಯಗಳು ನಡೆಯಲಿವೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ಹೇಳಿಕೊಂಡಿದೆ.

    ಇದಕ್ಕೂ ಮೊದಲು 2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಜ್ಜಾಗಿದೆ. ನವೆಂಬರ್ 24 ಮತ್ತು 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ 574 ಆಟಗಾರರ ಬಿಡ್ಡಿಂಗ್ ನಡೆಯಲಿದೆ.

    Continue Reading

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    LATEST NEWS

    Trending