Thursday, February 9, 2023

ಪೋಕ್ಸೋ ಆರೋಪಿಗೆ PUC ಪರೀಕ್ಷೆ ಬರೆಯಲು ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: 8ನೇ ತರಗತಿ ಓದುತ್ತಿರುವ ಬಾಲಕಿಯನ್ನು ಪುಸಲಾಯಿಸಿ ಪೋಕ್ಸೋ ಆರೋಪದಲ್ಲಿ ಬಂಧನಕ್ಕೆ ಒಳಗಾದಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗೆ ವಾರ್ಷಿಕ ಪರೀಕ್ಷೆ ಬರೆಯಲು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

ಏಪ್ರಿಲ್ 22ರಂದು ಪರೀಕ್ಷೆ ಆರಂಭವಾಗುತ್ತಿದ್ದು, ನನಗೆ ಪರೀಕ್ಷೆ ಬರೆಯಲು ಜಾಮೀನು ನೀಡಬೇಕು’ ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರೋಪಿಯು ಒಂದು ಲಕ್ಷ ರೂಪಾಯಿ ಮೊತ್ತಕ್ಕೆ ವೈಯಕ್ತಿಕ ಭದ್ರತೆ ಬಾಂಡ್‌ ನೀಡಬೇಕು. ಪರೀಕ್ಷೆ ಮುಗಿದ ನಂತರ ತಕ್ಷಣ ಮೇ 11ರ ಸಂಜೆ 6 ಗಂಟೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ವಯಂ ಶರಣಾಗಬೇಕು.

ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಆರೋಪಿ ವಾಸ ಮಾಡುವ ವ್ಯಾಪ್ತಿ ಪ್ರದೇಶದ ಪೊಲೀಸ್‌ ಠಾಣೆಗೆ ತೆರಳಿ ಪ್ರತಿದಿನ ಸಂಜೆ 6 ಗಂಟೆಗೆ ಸಹಿ ಮಾಡಬೇಕು.

ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು. ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗಬಾರದು. ಒಂದೊಮ್ಮೆ ಆರೋಪಿ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪ್ರಾಸಿಕ್ಯೂಷನ್‌ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ಅಪ್ಪ–ಅಮ್ಮ ಮನೆಯಲ್ಲಿ ಇಲ್ಲದ ವೇಳೆ ನನ್ನ ತಂಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿಗಳು ಮನೆಯಿಂದ ಹೊರಗೆ ಕರೆದೊಯ್ದು ಸುತ್ತಾಡಿಸಿಕೊಂಡು ಬಂದಿದ್ದರು.

ಈ ವೇಳೆ ಮನೆಯೊಳಗೆ ಬಂದ ಅವರನ್ನು ಹೊರಹೋಗುವಂತೆ ಸೂಚಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಸಂತ್ರಸ್ತೆಯ ಅಕ್ಕ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಪೊಕ್ಸೊ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...