BANTWAL
81ರ ವೃದ್ಧನನ್ನು ಜೈಲು ಶಿಕ್ಷೆಯ ಬದಲು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್..!
81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ನ್ಯಾಯಾಲಯ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ :81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ನ್ಯಾಯಾಲಯ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ.
ಘಟನೆ ವಿವರ:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ.
2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು.
ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು.
ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.
ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು.
ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ.
ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ.
ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.
ಐತಪ್ಪ ನಾಯ್ಕನಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿ ನ್ಯಾಯ ದೊರಕಿಸಿದ್ದಾರೆ.
ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲು ಮನೆ ಬಳಿಯಲ್ಲೇ ಅಂಗನವಾಡಿ ಸೇವೆಗೆ ಜೋಡಿಸುವ ಕೆಲಸ ಮಾಡಿದ್ದಾರೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
BANTWAL
ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.