LATEST NEWS
ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು
Published
2 hours agoon
By
NEWS DESK3ಮಂಗಳೂರು/ತಿರುವನಂತಪುರ : ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿದೆ.
ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.
ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ
ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಕೂಡ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಗೋಪನ್ ಅವರ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿದೆ.
LATEST NEWS
ಹಸುವಿನ ಬಾಲಕ್ಕೆ ಮ*ಚ್ಚಿನಿಂದ ಹ*ಲ್ಲೆ; ದುರುಳರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯ
Published
16 minutes agoon
16/01/2025ಮಂಗಳೂರು/ಮೈಸೂರು : ಮಲಗಿದ್ದ ಮೂರು ಹಸುಗಳ ಕೆ*ಚ್ಚಲು ಕೊ*ಯ್ದ ಅ*ಮಾನವೀಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಜನವರಿ 12 ರಂದು ನಡೆದಿದ್ದು, ಇದೀಗ ಆ ಘಟನೆ ಮಾಸುವ ಮುನ್ನವೇ ಮೈಸೂರಿನ ನಂಜನಗೂಡಿನಲ್ಲಿ ಹಸುವಿನ ಬಾ*ಲಕ್ಕೆ ಮ*ಚ್ಚಿನಿಂದ ಹಲ್ಲೆ ನಡೆಸಿರುವ ಮತ್ತೊಂದು ವಿ*ಕೃತಿ ಬೆಳಕಿಗೆ ಬಂದಿದೆ.
ಹಸುವಿನ ಕ*ಳ್ಳತನಕ್ಕೆ ಬಂದಿದ್ದ ಖದೀಮರು ಮ*ಚ್ಚಿಂದ ಹಸುವಿನ ಮೇಲೆ ಹ*ಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಹಸು ತಪ್ಪಿಸಿಕೊಳ್ಳಲು ಯತ್ನಿಸುವಾಗ ಮ*ಚ್ಚಿನಿಂದ ಹ*ಲ್ಲೆ ನಡೆಸಿದ್ದಾರೆ.
ಈ ಅ*ಮಾನವೀಯ ಕೃ*ತ್ಯ ನಂಜುಂಡೇಶ್ವರನ ಸನ್ನಿಧಿಯಲ್ಲಿ ನೂರಾರು ಹಸುಗಳ ಪೈಕಿ ನಡೆದಿದೆ. ದೇವಸ್ಥಾನಕ್ಕೆ ದಾನವಾಗಿ ಕೊಡಲಾಗುತ್ತಿದ್ದ ಹಸುಗಳ ಕಳ್ಳತನಕ್ಕೆ ಈ ಹಿಂದೆ ಪ್ರಯತ್ನ ನಡೆದಿತ್ತು. ನಿನ್ನೆ ರಾತ್ರಿ ದೇವಾಲಯದ ಆವರಣದಲ್ಲಿದ್ದ ಹಸುವಿನ ಬಾಲಕ್ಕೆ ಮ*ಚ್ಚಿನಿಂದ ಹ*ಲ್ಲೆ ನಡೆಸಲಾಗಿದೆ. ಈಗಾಗಲೇ ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಗಾ*ಯಗೊಂಡ ಹಸುವಿಗೆ ಚಿಕಿತ್ಸೆ ನೀಡಿದ್ದಾರೆ.
ನಂಜುಂಡೇಶ್ವರ ದೇವಸ್ಥಾನದಲ್ಲಿ ಈ ಕೃತ್ಯ ನಡೆದಿರುವುದು ಎಲ್ಲರಲ್ಲೂ ಆತಂಕ ತಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಕಠಿಣ ಶಿಕ್ಷೆ ವಿಧಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ನಂಜನಗೂಡು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸುತ್ತುಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
LATEST NEWS
ತಿರುಪತಿಯಲ್ಲಿ ಮತ್ತೊಂದು ದುರಂ*ತ; ಜಾರಿ ಬಿದ್ದು ಬಾಲಕ ಸಾ*ವು
Published
18 minutes agoon
16/01/2025By
NEWS DESK4ಮಂಗಳೂರು/ಅಮರಾವತಿ : ತಿರುಪತಿಯಲ್ಲಿ ನಡೆದ ಕಾಲ್ತುಳಿತ ದು*ರಂತ ಇನ್ನೂ ಮಾಸಿಲ್ಲ. ಇದೀಗ ಮತ್ತೊಂದು ದುರ್ಘ*ಟನೆ ಸಂಭವಿಸಿದೆ. ಮೂರು ವರ್ಷದ ಬಾಲಕನೊಬ್ಬ ಮೆಟ್ಟಿಲಿನಿಂದ ಜಾರಿ ಬಿದ್ದು ಮೃ*ತಪಟ್ಟಿರುವ ಘಟನೆ ತಿರುಪತಿ ತಿರುಮಲ ದೇವಸ್ಥಾನ ಮಂಡಳಿಯ ಅತಿಥಿಗೃಹದಲ್ಲಿ ಸಂಭವಿಸಿದೆ.
ಪೋಷಕರೊಂದಿಗೆ ವೆಂಕಟೇಶ್ವರ ಸ್ವಾಮಿ ದರ್ಶನಕ್ಕಾಗಿ ಬಂದಿದ್ದ ಬಾಲಕ ಪದ್ಮನಾಭ ನಿಲಯದ ಮೊದಲ ಮಹಡಿಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಈ ದುರಂ*ತ ನಡೆದಿದೆ ಎಂದು ವರದಿಯಾಗಿದೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಕುಟುಂಬ ಬಂದಿತ್ತು. ಬಾಲಕ ತನ್ನ ಸಹೋದರನೊಂದಿಗೆ ಆಡುತ್ತಿದ್ದ. ಈ ವೇಳೆ ಜಾರಿ ಮೆಟ್ಟಿಲಿನಿಂದ ಕೆಳಗೆ ಬಿ*ದ್ದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾಲ್ತುಳಿತ ಪ್ರಕರಣ:
ಜ.9ರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ನಿರ್ಧರಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಜ.8ರ ಸಂಜೆಯೇ ಭಾರಿ ಜನರು ಜಮಾಯಿಸಿದ್ದರು.
ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವ*ಸ್ಥಗೊಂಡ ಕಾರಣ ಅವರನ್ನು ಹೊರಕ್ಕೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳನುಗ್ಗುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಕೆಲವರು ಕೆಳಗೆ ಬಿ*ದ್ದಿದ್ದು ಕಾಲ್ತು*ಳಿತದಿಂದ 6 ಮಂದಿ ಮೃ*ತಪಟ್ಟು, ಹಲವರು ಗಾ*ಯಗೊಂಡಿದ್ದರು.
ಇದನ್ನೂ ಓದಿ : ಒಂದೇ ಬಾರಿಗೆ 45 ಮಂದಿ ರೌಡಿ ಶೀಟರ್‌ಗಳು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ
ಲಡ್ಡು ಕೌಂಟರ್‌ನಲ್ಲಿ ಬೆಂ*ಕಿ :
ಕಾ*ಲ್ತುಳಿತ ಪ್ರಕರಣ ಬೆನ್ನಲ್ಲೇ ಮತ್ತೊಂದು ಅವಘ*ಡ ಸಂಭವಿಸಿತ್ತು. ಜ.13 ರಂದು ಲಡ್ಡು ಕೌಂಟರ್ ಸಂಖ್ಯೆ 47 ರಲ್ಲಿ ಬೆಂ*ಕಿ ಕಾಣಿಸಿಕೊಂಡಿತ್ತು. ಕೌಂಟರ್‌ನಲ್ಲಿದ್ದ ಕಂಪ್ಯೂಟರ್ ಯುಪಿಎಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘ*ಡ ನಡೆದಿತ್ತು. ಬೆಂ*ಕಿ ಹರಡುತ್ತಿದ್ದಂತೆಯೇ ಭಕ್ತರು ಭಯಭೀತರಾಗಿ ಸ್ಥಳದಿಂದ ಹೊರಗೋಡಿದ್ದರು. ಟಿಟಿಡಿ ಸಿಬ್ಬಂದಿ ಬೆಂ*ಕಿ ನಂದಿಸಿದ್ದರು.
DAKSHINA KANNADA
ಮಂಗಳೂರು : ಬ್ಯಾಡ್ಮಿಂಟನ್ ಕೋರ್ಟ್‌ನಲ್ಲೇ ಕು*ಸಿದುಬಿದ್ದು ವಿದ್ಯಾರ್ಥಿ ಸಾ*ವು
Published
59 minutes agoon
16/01/2025ಮಂಗಳೂರು: ಫ್ರೆಂಡ್ಸ್ ಜೊತೆ ಆಡುತ್ತಿದ್ದ ವೇಳೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾ*ವನ್ನಪ್ಪಿದ ಘಟನೆ ಮಂಗಳೂರಿನ ಫಳ್ನೀರ್‌ನಲ್ಲಿ ನಿನ್ನೆ (ಜ.15) ನಡೆದಿದೆ.
ಮೂಲತಃ ಅಡ್ಡೂರಿನ ನಿವಾಸಿಯಾಗಿದ್ದು, ಪ್ರಸ್ತುತ ಅತ್ತಾವರ ಐವರಿ ಟವರ್‌ನಲ್ಲಿ ವಾಸವಿದ್ದ ಶಹೀಮ್ (20) ಮೃ*ತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಇಸನದನೂ ಓದಿ : ಬಾಲಿವುಡ್ ನಟ ಸುದೀಪ್ ಪಾಂಡೆ ವಿಧಿವಶ
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದ ಶಹೀಮ್ ಗೆಳೆಯರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕೋರ್ಟ್‌ನಲ್ಲೇ ಕು*ಸಿದು ಬಿ*ದ್ದಿದ್ದಾನೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃ*ತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
LATEST NEWS
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಾ*ರಣಾಂತಿಕ ಹ*ಲ್ಲೆ
ಒಂದೇ ಬಾರಿಗೆ 45 ಮಂದಿ ರೌಡಿ ಶೀಟರ್‌ಗಳು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ
ಕರಾವಳಿ ಉತ್ಸವ : ಸಂಗೀತ ರಸಮಂಜರಿ, ಮುಖ್ಯಮಂತ್ರಿ ಆಗಮನ
ಬಾಲಿವುಡ್ ನಟ ಸುದೀಪ್ ಪಾಂಡೆ ವಿಧಿವಶ
ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?