Connect with us

DAKSHINA KANNADA

ಆಮ್ಲಜನಕ ಬಫರ್ ಸ್ಟಾಕ್ ಮಾಡುವ ಕುರಿತು ಹೈಕೋರ್ಟ್ ಅಸಮಾಧಾನ; ಹೈಕೋರ್ಟ್ ಹೈಕೋರ್ಟ್ ಆದೇಶಕ್ಕೆ ಸೊಪ್ಪು ಹಾಕದ ಕೇಂದ್ರ ಸರಕಾರ..!

Published

on

ಬೆಂಗಳೂರು: ಆಮ್ಲಜನಕ ಬಫರ್ ಸ್ಟಾಕ್ ಮಾಡುವಂತೆ ಸಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದರೂ ಈ ತನಕ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಕೋವಿಡ್‌ಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಕ್ಷಣದಿಂದಲೇ ಅನ್ವಯವಾಗುವಂತೆ ರಾಜ್ಯದ ಆಮ್ಲಜನಕ ಪಾಲನ್ನು ಪ್ರತಿ ದಿನಕ್ಕೆ 1,200 ಟನ್‌ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಎಲ್ಲಾ ರಾಜ್ಯಗಳಲ್ಲಿ ಆಮ್ಲಜನಕ ಕಾಯ್ದಿರಿಸಿದ ದಾಸ್ತಾನು ವ್ಯವಸ್ಥೆ ಮಾಡುವಂತೆ ಏಪ್ರಿಲ್ 30ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

ಆದರೆ ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ ರಾಜ್ಯದ ಆಮ್ಲಜನಕ ಹಂಚಿಕೆ ಪಾಲನ್ನು 865 ಟನ್‌ನಿಂದ 965 ಟನ್‌ಗಳಿಗೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿತು.

ಕೋವಿಡ್ ಪ್ರಕರಣಗಳ ಏರಿಕೆಯ ಆಧಾರದಲ್ಲಿ ಹೆಚ್ಚುವರಿ ಬೇಡಿಕೆ ಪರಿಶೀಲಿಸಿ ಸಲ್ಲಿಸುವಂತೆ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು.
ರಾಜ್ಯದಲ್ಲಿ ಬಫರ್ ಸ್ಟಾಕ್ ಆಕ್ಸಿಜನ್ ಲಭ್ಯವಿದ್ದರೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಸಾವನ್ನಪ್ಪುವಂತಹ ಪ್ರಕರಣ ನಡೆಯುತ್ತಿರಲಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಕರ್ನಾಟಕ ಹೊಸ ಪ್ರಸ್ತಾವನೆ ಸಲ್ಲಿಸುವ ತನಕ ಪ್ರತಿದಿನದ ಪಾಲನ್ನು 1,200 ಟನ್‌ಗೆ ಹೆಚ್ಚಿಸುವಂತೆ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.

ಅರ್ಜಿಯ ವಿಚಾರಣೆ ವೇಳೆ ಕರ್ನಾಟಕದಲ್ಲಿ ಒಂದು ವಾರದ ಅವಧಿಯಲ್ಲಿ 1.60 ಲಕ್ಷದಷ್ಟು ಹೊಸ ಪ್ರಕರಣ ದಾಖಲಾಗಿರುವುದು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4.64 ಲಕ್ಷ ದಾಟಿರುವುದನ್ನು ನ್ಯಾಯಪೀಠ ಉಲ್ಲೇಖಿಸಿತು.

ಕರ್ನಾಟಕದಲ್ಲಿಯೇ ಆಕ್ಸಿಜನ್ ಉತ್ಪಾದನೆ ಘಟಕಗಳಿವೆ. ಆದರೆ ಕೇಂದ್ರ ವಿಶಾಖಪಟ್ಟಣ, ಓಡಿಶಾ,ಮತ್ತು ಕೇರಳದಿಂದ ಹೆಚ್ಚುವರಿ ಆಮ್ಲಜನಕ ತರಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending