Connect with us

    LATEST NEWS

    ಹಳೆ ವಾಹನದ ಫಿಟ್ನೆಸ್‌ ಸರ್ಟಿಫಿಕೇಟ್ ನವೀಕರಣಕ್ಕೆ ದುಬಾರಿ ಶುಲ್ಕ: ಹೈಕೋರ್ಟ್‌ನಿಂದ ತಡೆಯಾಜ್ಞೆ

    Published

    on

    ಬೆಂಗಳೂರು: ಹಳೆಯ ವಾಹನಗಳ ರಿಜಿಸ್ಟ್ರೇಷನ್ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣಕ್ಕೆ ದುಬಾರಿ ಶುಲ್ಕ ಮತ್ತು ದಂಡ ವಿಧಿಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.


    ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ಲಾರಿ ಮಾಲೀಕರ ಒಕ್ಕೂಟ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಪೀಠ

    ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಸಾರಿಗೆ ಇಲಾಖೆ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
    ಅರ್ಜಿದಾರರ ವಾದ
    ಸರ್ಕಾರ 2022ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ 15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳ ದಂಡದ ಪ್ರಮಾಣದಲ್ಲಿ ಭಾರಿ ಏರಿಕೆ ಮಾಡಿದೆ.

    ನೋಂದಣಿ ಮತ್ತು ಫಿಟ್ನೆಸ್ ಪ್ರಮಾಣಪತ್ರಗಳ ನವೀಕರಣಕ್ಕೆ 10 ಸಾವಿರ ರೂಪಾಯಿ ಶುಲ್ಕ ವಿಧಿಸಲಾಗಿದೆ.

    ಒಂದು ವೇಳೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣದ ಅವಧಿ ಮುಗಿದಿದ್ದರೆ ಸಾರಿಗೇತರ ವಾಹನಗಳಿಗೆ ತಿಂಗಳಿಗೆ ಹೆಚ್ಚುವರಿಯಾಗಿ 500 ರೂ ದಂಡ ವಿಧಿಸುತ್ತಿದೆ.

    ಇದು ದುಬಾರಿ ಶುಲ್ಕ ಮತ್ತು ದಂಡವಾಗಿದ್ದು, ವಾಹನಗಳ ಮಾಲಿಕರಿಗೆ ಹೊರೆಯಾಗಿದೆ.

    ಅಲ್ಲದೇ, ಪ್ರತಿ ದಿನದ ವಿಳಂಬಕ್ಕೂ ಅಧಿಕ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ. ಭಾರೀ ಸರಕು ವಾಹನಗಳ ನೋಂದಣಿ ಮತ್ತು

    ನವೀಕರಣಕ್ಕೆ 10 ಸಾವಿರ ರೂಪಾಯಿಗಳನ್ನು ನಿಗದಿಪಡಿಸಿದ್ದರೂ ಸಹ ಹೆಚ್ಚುವರಿ ದಿನವೊಂದಕ್ಕೆ 1,500 ರೂಪಾಯಿ ಮತ್ತು ಮಧ್ಯಮ ಸರಕು ವಾಹನಗಳಿಗೆ ದಿನವೊಂದಕ್ಕೆ 1,300 ರೂಪಾಯಿ ವಿಳಂಬ ಶುಲ್ಕವನ್ನು ವಿಧಿಸುತ್ತಿದೆ.

    ಹಳೆಯ ವಾಹನಗಳಿಗೆ ಭಾರೀ ಮೊತ್ತದ ದಂಡ ಪಾವತಿಸಿ ನಿರ್ವಹಣೆ ಮಾಡುವುದು ಕಷ್ಟ. ಆದ್ದರಿಂದ ಸರ್ಕಾರದ ದಂಡ ಶುಲ್ಕ ಹೆಚ್ಚಳದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

    LATEST NEWS

    ಸ್ನೇಹಿತನಿಗೆ ಥಳಿಸಿ ಅ*ಪ್ರಾಪ್ತೆ ಮೇಲೆ ಅ*ತ್ಯಾಚಾ*ರ ಎಸಗಿದ ಟ್ರಕ್ ಚಾಲಕ

    Published

    on

    ಮಂಗಳೂರು/ ಮಧ್ಯಪ್ರದೇಶ : 15 ವರ್ಷದ ಬಾ*ಲಕಿಯ ಮೇಲೆ ಟ್ರಕ್ ಚಾಲಕ ಅ*ತ್ಯಾಚಾ*ರವೆಸಗಿರುವ ಘಟನೆ ರೈಸನ್ ಜಿಲ್ಲೆಯಲ್ಲಿ ನಡೆದಿದೆ. ಸಿಲ್ವಾನಿ – ಸಾಗರ್ ರಸ್ತೆಯಲ್ಲಿರುವ ಸಿಯರಾಮೌ ಅರಣ್ಯದಲ್ಲಿ ಕೃ*ತ್ಯ ನಡೆದಿದೆ. ಟ್ರಕ್ ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

    ಸ್ನೇಹಿತನಿಗೆ ಥಳಿಸಿ ಕೃ*ತ್ಯ :

    ಸಂ*ತ್ರಸ್ತೆ ಮತ್ತು ಆಕೆಯ 21 ವರ್ಷದ ಸ್ನೇಹಿತ ವನದೇವಿ ದೇವಾಲಯ ಭೇಟಿ ನೀಡಲು ತಮ್ಮ ಬೈಕನ್ನು ರಸ್ತೆ ಬದಿ ನಿಲ್ಲಿಸಿ ತೆರಳುತ್ತಿದ್ದರು. ಈ ವೇಳೆ ಒಂದು ಟ್ರಕ್ ಕೆಟ್ಟು ನಿಂತಿತ್ತು. ಅದರ ಚಾಲಕ ಮತ್ತು ಅವನ ಸಹಚರರು ಕೂಡ ಕಾಡಿನೊಳಗೆ ಹೋಗಿದ್ದಾರೆ.  ಬಾಲಕಿಯ ಸ್ನೇಹಿತನಿಗೆ ಥಳಿಸಿ ಬೈಕ್ ಕೀ ಕಿತ್ತುಕೊಂಡಿದ್ದಾರೆ. ಟ್ರಕ್ ಚಾಲಕ ಸಂಜು ಅ*ಪ್ರಾಪ್ತೆಯನ್ನು ಕಾಡಿನೊಳಗೆ ಎಳೆದೊಯ್ದು ಆಕೆಯ ಮೇಲೆ ಆ*ತ್ಯಾಚಾ*ರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

    ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

    ಮೂವರು ಆರೋಪಿಗಳು ಹೋದ ಬಳಿಕ ಅಪ್ರಾ*ಪ್ತೆ ಹಾಗೂ ಆಕೆಯ ಸ್ನೇಹಿತ ಮುಖ್ಯರಸ್ತೆಗೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಬೆಂಬತ್ತಿದ ಪೊಲೀಸರು ಟ್ರಕ್ ಚಾಲಕ ಸಂಜು, ಸಹಚರರಾದ ಶಿವನಾರಾಯಣ ಎಂಬವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿ  ಅಕ್ಷಯ್ ಗಾಗಿ ಬಲೆ ಬೀಸಿದ್ದಾರೆ.

    Continue Reading

    International news

    ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !

    Published

    on

    ಮಂಗಳೂರು/ಸೌದಿ ಅರೇಬಿಯಾ: ಐಪಿಎಲ್ ಸೀಸನ್ 18ರ ಹರಾಜು ಪ್ರಕ್ರಿಯೆ ನಿನ್ನೆಯಿಂದಲೇ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದು, ಅದರಲ್ಲಿ ಆರ್ ಸಿಬಿಗೆ ಯಾರೆಲ್ಲಾ ಆಟಗಾರರು ಬಂದಿದ್ದಾರೆ ಇಲ್ಲಿದೆ ನೋಡಿ.


    ಮೆಗಾ ಹರಾಜು ಪ್ರಕ್ರಿಯೆ ಇವತ್ತು ಕೂಡ ಮುಂದುವರಿಯಲ್ಲಿದ್ದು, ನಿನ್ನೆಯ ಹರಾಜಿನಲ್ಲಿ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆದರೆ ಆರ್ ಸಿಬಿಯ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು. ಕನ್ನಡಿಗ ಕೆ. ಎಲ್ ರಾಹುಲ್ ಈ ಬಾರಿಯಾದರು ಆರ್ ಸಿಬಿಗೆ ಬರಬಹುದು ಎಂಬ ನಿರೀಕ್ಷೆ ಈಡೆರಲಿಲ್ಲ.
    ಅಲ್ಲದೆ, ಪ್ರಮುಖ ಆಟಗಾರರದ ರಿಷಭ್ ಪಂತ್, ಜೋಸ್ ಬಟ್ಲರ್, ಮಾಜಿ ಆಟಗಾರ ಯಜುವೇಂದ್ರ ಚಹಲ್ ರವರನ್ನು ಖರೀದಿಸಲು ವಿಫಲವಾಯಿತು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಆರ್ ಟಿಎಂ ಬಳಸಿ ಉಳಿಸಿಕೊಳ್ಳದ ಆರ್ ಸಿಬಿ ಮ್ಯಾನೆಜ್ ಮೆಂಟ್ ನಿರ್ಧಾರಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

    ಇನ್ನೂ ಮೊದಲನೇ ದಿನದ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ 6 ಆಟಗಾರರನ್ನು ಖರೀದಿಸಿತು. ಅದರಲ್ಲಿ ಮೂವರು ವಿದೇಶಿಯರು ಹಾಗೂ ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ.

    ಇದನ್ನೂ ಓದಿ: ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

    ಮೊದಲ ದಿನದ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ :

    1.ಲಿಯಾಮ್ ಲಿವಿಂಗ್ ಸ್ಟೋನ್- ರೂ 8.75 ಕೋಟಿ
    2.ಫಿಲ್ ಸಾಲ್ಟ್- ರೂ. 11.5 ಕೋಟಿ
    3.ಜಿತೇಶ್ ಶರ್ಮಾ- ರೂ. 11 ಕೋಟಿ
    4.ಜೋಶ್ ಹ್ಯಾಜಲ್ ವುಡ್- ರೂ. 12.5 ಕೋಟಿ
    5.ಅನೂಜ್ ರಾವತ್- ರೂ. 30 ಲಕ್ಷ
    6.ರಾಸಿಖ್ ಸಲಾಮ್ ದಾರ್-ರೂ. 6ಕೋಟಿ
    7.ಸುಯಾಶ್ ಶರ್ಮಾ-ರೂ. 2.6ಕೋಟಿ

    Continue Reading

    International news

    ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

    Published

    on

    ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ.


    ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಅದ್ಬುತವಾಗಿ ನಡೆಯುತ್ತದೆ. ಒಂದೇ ಒಂದು ದಿನದಲ್ಲಿ ಇಡೀ ಲೋಕಸಭಾ ಚುನಾವಣೆಯ ಮತ ಎಣಿಕೆ ಮಾಡಿದ ಶ್ರೇಯಸ್ಸು ಭಾರತದ್ದು ಎಂದಿದ್ದಾರೆ.

    ಇದನ್ನೂ ಓದಿ: ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
    ಕ್ಯಾಲಿಫೋರ್ನಿಯಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿರುವ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ಪೊಸ್ಟ್ ಹಾಕಿದ್ದಾರೆ. ಅದರ ಅಡಿಬರಹದಲ್ಲಿ, ಭಾರತದಲ್ಲಿ ಚುನಾವಣೆ ಎಂದರೆ ವಂಚನೆಯೇ ಮೊದಲ ಗುರಿ ಇರುವಲ್ಲಿ ಒಂದೇ ಒಂದು ದಿನದಲ್ಲಿ 64 ಕೋಟಿ ಮತಗಳನ್ನು ಎಣಿಕೆ ಮಾಡಿದ್ದಾರೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಕೂಡ ಮತಗಳು ಎಣಿಕೆ ಆಗುತ್ತಲೇ ಇವೆ ಎಂದು ಬರೆದಿದ್ದಾರೆ.

    ಕ್ಯಾಲಿಫೋರ್ನಿಯಾದಲ್ಲಿ ಮತ ಎಣಿಕೆ ಕಾರ್ಯ ವಿಳಂಬ ಯಾಕೆ :
    ಅಮೆರಿಕಾದಲ್ಲಿ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದೆ. ಇದನ್ನು ಎಣಿಕೆ ಮಾಡುವ ಅನೇಕ ರೀತಿಯ ಪ್ರಕ್ರಿಯೆಗಳನ್ನು ಮಾಡುವ ಕಾರಣ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಂತಹ ದೊಡ್ಡ ದೊಡ್ಡ ನಗರಗಳಲ್ಲಿ ಈ ಮೇಲ್ ಇನ್ ವೋಟಿಂಗ್ ಗಳು ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ವಿಳಂಬ ನೀತಿಯನ್ನು ಎಲನ್ ಮಸ್ಕ್ ಟೀಕಿಸಿ ಭಾರತವನ್ನು ಹೊಗಳಿದ್ದಾರೆ.
    ಅಮೇರಿಕಾದಲ್ಲಿ ಹಿಂದಿನಿಂದಲೂ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದ್ದು, ಈಗಲೂ ಮುಂದುವರಿದುಕೊಂಡು ಬಂದಿದೆ.

    Continue Reading

    LATEST NEWS

    Trending