Connect with us

    DAKSHINA KANNADA

    ಸುಬ್ರಹ್ಮಣ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ದಾರುಣ ಸಾವು..!

    Published

    on

    ಸುಬ್ರಹ್ಮಣ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ದಾರುಣ ಸಾವು..!

    ಕಡಬ: ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಸಮೀಪದ ಪುತ್ತಿಲ ಎಂಬಲ್ಲಿ ನಡೆದಿದೆ.

    ಸುಮಾರು ಹನ್ನೆರಡು ವರ್ಷ ಪ್ರಾಯವಿರುವ ಗಂಡಾನೆ ಸಾವನ್ನಪ್ಪಿದ್ದು, ಸ್ಥಳೀಯರು ಇಂದು ಮುಂಜಾನೆ ಆನೆಯನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

    ಆಹಾರ ಅರಸಿ ಆನೆಯು ಕಾಡಿನಿಂದ ರಸ್ತೆ ಬದಿಗೆ ಬಂದಿದ್ದು, ರಸ್ತೆ ಬದಿಯಲ್ಲಿ ಹಾದುಹೋಗುವ ವಿದ್ಯುತ್ ತಂತಿ ತಗುಲಿ‌ ಆನೆ ಆನೆ ಸಾವಿಗೀಡಾಗಿದೆ. ಮರದ ಕೊಂಬೆಯೊಂದನ್ನು ಎಳೆಯಲು ಪ್ರಯತ್ನಿಸಿದ್ದ ಸಂದರ್ಭದಲ್ಲಿ ಕೊಂಬೆ ತುಂಡಾಗಿ ವಿದ್ಯುತ್ ತಂತಿ ಮೇಲೆ ಬಿದ್ದು, ತಂತಿಯು ಮುರಿದು ಆನೆಗೆ ಸ್ಪರ್ಷಿಸಿರುವ ಸಾಧ್ಯತೆಯಿದೆ.

    ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೋಸ್ಟ್ ಮಾರ್ಟಮ್ ವರದಿ ಬಳಿಕವೇ ಆನೆ ಸಾವಿಗೆ ಸ್ಪಷ್ಟ ಕಾರಣ‌ ತಿಳಿಯುವ ಸಾಧ್ಯತೆಯಿದೆ.

    ಆಹಾರವನ್ನು ಅರಸಿ ಕಾಡಾನೆಗಳು ನಾಡಿನತ್ತ ಬರುವುದು ಈ ಭಾಗಗಳಲ್ಲಿ ಸಾಮಾನ್ಯವಾಗಿದೆ. ಕೆಲವು ಸಂದರ್ಭಗಳಲ್ಲಿ ಕೃಷಿ ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿಯನ್ನೂ ಮಾಡುವುದರ ಜೊತೆಗೆ ಆಹಾರವನ್ನು ತಿಂದು ಆನೆಗಳು ಮತ್ತೆ ಕಾಡಿಗೆ ಹೋಗುವುದು ಸಾಮಾನ್ಯವಾಗಿದೆ.

    ನಾಡಿಗೆ ಬಂದ ಸಂದರ್ಭಗಳಲ್ಲಿ ಕೆಲವು ಅನಾಹುತಗಳಿಗೆ ಸಿಲುಕಿ ಆನೆಗಳು ಸಾವನ್ನಪ್ಪುವುದು ಕೂಡಾ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಈ ಕುರಿತು ಗಮನಹರಿಸಬೇಕಿದೆ

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡಿ; ರಾಜ್ಯ ಸರಕಾರಕ್ಕೆ ದ.ಕ. ಹಾಲು ಒಕ್ಕೂಟ ಪ್ರಸ್ತಾವನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

    ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್‌ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.

    ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್‌ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಾಗುವುದು. ಇದರಿಂದ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್‌, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್‌, ಕಮಲಾಕ್ಷ ಹೆಬ್ಟಾರ್‌, ಸವಿತಾ ಎನ್‌.ಶೆಟ್ಟಿ, ಸ್ಮಿತಾ ಆರ್‌.ಶೆಟ್ಟಿ, ಸುಭದ್ರಾ ರಾವ್‌, ವ್ಯವಸ್ಥಾಪಕ ನಿರ್ದೇಶಕ ವಿವೇಕ್‌, ಮಾರುಕಟ್ಟೆ ಮುಖ್ಯಸ್ಥ ರವಿರಾಜ್‌ ಉಡುಪ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್; ವ್ಯಕ್ತಿಗೆ ಗಂಭೀ*ರ ಗಾ*ಯ

    Published

    on

    ಪುತ್ತೂರು : ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಕಾಂಪೌಂಡ್‌ ಗೆ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀ*ರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ(ಜು.22) ರಾತ್ರಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಗಂಭೀರವಾಗಿ ಗಾಯಗೊಂಡವರು. ತನ್ನ ಬಾವನಿಗೆ ಸೇರಿದ ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

    ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.

    ಇದನ್ನೂ ಓದಿ :‘ಕೊಹ್ಲಿ’ ಜೊತೆಗಿನ ನಿಮ್ಮ ಸಂಬಂಧ ಹೇಗಿದೆ? ಎಂದು ಪ್ರಶ್ನಿಸಿದಕ್ಕೆ ‘ಗಂಭೀರ್’ ಖಡಕ್ ಉತ್ತರವೇನು ಗೊತ್ತಾ?
    ತೀವ್ರ ಗಾಯಗೊಂಡ ರಶೀದ್‌ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

    Continue Reading

    DAKSHINA KANNADA

    ಸೊಳ್ಳೆ ಉತ್ಪತ್ತಿ ತಾಣವಾಗಿರುವ ಹೃದಯಭಾಗದ ಕಟ್ಟಡ; ಕಟ್ಟಡ ಮಾಲಕರಿಗೆ ನೊಟೀಸ್‌.!!

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಡೆಂಗ್ಯೂ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ಮಾಡ್ತಾ ಇದೆ. ಹಲವು ಜಾಗೃತಿ ಕಾರ್ಯಕ್ರಮದ ಮೂಲಕ ಲಾರ್ವಾ ಉತ್ಪತ್ತಿ ಸ್ಥಳಗಳನ್ನು ನಾಶ ಮಾಡುವ ಪ್ರಯತ್ನ ಕೂಡಾ ನಡೆಯುತ್ತಿದೆ. ಆದರೆ ನಗರದ ಹೃದಯಭಾಗದಲ್ಲೇ ಇರುವ ಬೃಹತ್ ವಾಣಿಜ್ಯ ಕಟ್ಟಡವೊಂದು ಸೊಳ್ಳೆ ಉತ್ಪತ್ತಿ ತಾಣವಾಗಿದೆ. ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಇರುವ ಸಹಕಾರಿ ಭವನ ಹೆಸರಿನ ಕಟ್ಟಡ ಇಡೀ ನಗರಕ್ಕೇ ಡೆಂಗ್ಯೂ ಮಲೇರಿಯ ಹರಡಿಸ್ತಾ ಇದೆ. ಬಾವಾ ಬಿಲ್ಡರ್ಸ್ ಗೆ ಸೇರಿರುವ ಈ ಕಟ್ಟಡ ಸದ್ಯ ಕಮಿಟಿಯೊಂದರ ಪಾಲಾಗಿದೆ ಎಂಬ ಮಾಹಿತಿ ಇದೆ.

    ಈ ಕಟ್ಟಡದ ಬೇಸ್ಮೆಂಟ್ ನಲ್ಲಿ ಏಳಡಿಯಷ್ಟು ಸೊಳ್ಳೆಗಳು ಸಂಗ್ರಹವಾಗಿ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಗಲೀಜು ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲಿ ಇರದ ಕಾರಣ ಡ್ರೈನೇಜ್ ನಲ್ಲಿ ಹರಿಯಬೇಕಾದ ನೀರು ಇಲ್ಲಿ ಸಂಗ್ರಹವಾಗಿದೆ. ಕಟ್ಟಡದ ಅಕ್ಕ ಪಕ್ಕದಲ್ಲಿ ಹೊಟೇಲ್ ಹಾಗೂ ಫಾಸ್ಟ್ ಫುಡ್ ಅಂಗಡಿಗಳ ಜೊತೆಗೆ ಸಾಕಷ್ಟು ಜನನಿಬಿಡ ಪ್ರದೇಶ ಇದಾಗಿದೆ. ಹೀಗಾಗಿ ಈ ಡ್ರೈನೇಜ್ ನೀರಿನ ಸಂಗ್ರಹದಿಂದ  ಜನರಿಗೆ ರೋಗ ಹರಡುವ ಆತಂಕ ಎದುರಾಗಿದೆ.  ವಾರಗಳ ಹಿಂದೆ  ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಎಚ್ಚರಿಕೆ ನೋಟಿಸ್ ನೀಡಿದ್ದರು.

    ಮಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸುತ್ತಿರುವ ಕಳ್ಳರ ಕಾಟ..!!

    ಡ್ರೈನೇಜ್ ನೀರು ನಿಲ್ಲದಂತೆ ಕ್ರಮಕ್ಕೆ ಸೂಚಿಸಿದ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ವಿಚಾರಕ್ಕೆ ಫೈನ್ ಕೂಡಾ ವಿಧಿಸಿದ್ದರು. ಆದರೆ  ಎಚ್ಚರಿಕೆ ನೋಟಿಸಿಗೂ ಕ್ಯಾರೇ ಅನ್ನದ ಕಟ್ಟಡದ ಕಮಿಟಿ ಫೈನ್‌ ಕೂಡಾ ಕಟ್ಟಿಲ್ಲ. ಇನ್ನು ಇಲ್ಲಿ ಸಂಗ್ರಹವಾಗಿರೋ ಡ್ರೈನೇಜ್ ನೀರು ಖಾಲಿ ಮಾಡೋ ಕೆಲಸಕ್ಕೂ ಕೈ ಹಾಕಿಲ್ಲ. ಹೀಗಾಗಿ ಇಂದು ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಟ್ಟಡ ಮಾಲೀಕರಾದ ಬಾವ ಬಿಲ್ಡರ್ಸ್ ಹಾಗೂ ಕಟ್ಟಡದ ಸಮಿತಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳವಾದಾಗ ಜಿಲ್ಲೆಯಿಂದಲೇ ಲಾರ್ವಾ ನಿರ್ಮೂಲನಾ ಕೇಂದ್ರಕ್ಕೆ ಆರೋಗ್ಯ ಸಚಿವರು ಚಾಲನೆ ನೀಡಿದ್ದರು. ಇದಾದ ಬಳಿಕ ಸಾಕಷ್ಟು ಕಡೆಯಲ್ಲಿ ಲಾರ್ವ ನಿರ್ಮೂಲನೆ ಮಾಡುವ ಕೆಲಸ ಕೂಡಾ ಆಗಿತ್ತು. ಆದ್ರೆ ಈ ಸಹಕಾರಿ ಭವನದ ಬೇಸ್ಮೆಂಟ್ ನಲ್ಲಿ ನಿಂತಿರೋ ಡ್ರೈನೇಜ್ ನೀರಿನಿಂದ ಇಡೀ ನಗರಕ್ಕೇ ಹಲವು ಕಾಯಿಲೆ ಹರಡುವ ಅಪಾಯ ಇದೆ. ಹೀಗಾಗಿ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    Continue Reading

    LATEST NEWS

    Trending