Connect with us

DAKSHINA KANNADA

cyclone biparjoy Alert : ಕರ್ನಾಟಕ ಕರಾವಳಿಯಲ್ಲಿ ಇಂದಿನಿಂದ “ಹೈ ವೇವ್ ಅಲರ್ಟ್”..!

Published

on

ಭಾರತೀಯ ಹವಾಮಾನ ಇಲಾಖೆ ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ.

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ.

ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಅಂದರೆ, ಜೂ.19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ.

ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೆವೆಗೆ 24/7 ಕಂಟ್ರೋಲ್ ರೂಂ. ಟೋಲ್ ಫ್ರೀ ಸಂಖ್ಯೆ:1077/0824-2442590 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಣ್ಣೂರು ಕರಾವಳಿಯ ಮೀನುಗಾರಿಕೆಯಿಂದ ಕೂಡಲೇ ವಾಪಸ್ಸಾಗಲು ಸೂಚನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 2023ನೇ ಸಾಲಿನ ಮಳೆಗಾಲದ ಅವಧಿಯಲ್ಲಿ ಜೂ.01 ರಿಂದ 2023ರ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

ಕೇರಳ ಸರ್ಕಾರವು 2023ರ ಜೂನ್ 9 ರಿಂದ 2023ರ ಜುಲೈ 31ರ ವರೆಗೆ (ಎರಡೂ ದಿನಗಳನ್ನು ಒಳಗೊಂಡಂತೆ) ಯಾಂತ್ರೀಕೃತ ದೋಣಿಗಳ ಟ್ರಾಲಿಂಗ್ ಅನ್ನು ನಿಷೇಧಿಸಿರುವುದರಿಂದ ಹಾಗೂ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಜಿಲ್ಲಾಧಿಕಾರಿಯವರ ಕೋರಿಕೆಯಂತೆ ಕಣ್ಣೂರು ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಮೀನುಗಾರಿಕಾ ದೋಣಿಗಳನ್ನು ತಕ್ಷಣವೇ ವಾಪಾಸ್ಸು ಕರೆಸುವಂತೆ ಹಾಗೂ ನಿಷೇಧಿತ ಅವಧಿಯಲ್ಲಿ ಮೀನುಗಾರಿಕೆಗೆ ಅನುಮತಿಸದಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿರ್ದೇಶನ ನೀಡಿದ್ದಾರೆ.

BELTHANGADY

ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ

Published

on

ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

vasanth bangera

ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ  ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.

ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Continue Reading

DAKSHINA KANNADA

ಮೇ 9 ರಂದು SSLC ಫಲಿತಾಂಶ ಪ್ರಕಟ…!

Published

on

ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ


2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ಫಲಿತಾಂಶವನ್ನು ನೋಡಲು ಈ ವೆಬ್‌ಸೈಟ್ ಬಳಸಿ..!

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.


ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್‌ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!


ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending