Connect with us

LATEST NEWS

ಬೆಂಗಳೂರು ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪರಿಶೀಲಿಸಿದ ನಿತಿನ್‌ ಗಡ್ಕರಿ :ಫೆಬ್ರವರಿಯಲ್ಲಿ ಪ್ರಧಾನಿ, ರಾಷ್ಟ್ರಪತಿಗಳಿಂದ ಲೋಕಾರ್ಪಣೆ..!

Published

on

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಜೊತೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ.

ವೈಮಾನಿಕ ತಪಾಸಣೆಯ ನಂತರ ಸಚಿವರ ಹೆಲಿಕಾಪ್ಟರ್ ರಾಮನಗರ ಜಿಲ್ಲೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಳಿಯಿತು.

ಮುಂದಿನ ಫೆಬ್ರವರಿ ತಿಂಗಳಿನಿಂದಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಬಹುನಿರೀಕ್ಷಿತ ಬೆಂಗಳೂರು – ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೊಳ್ಳಲಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ.

ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ದಶಪಥ ರಸ್ತೆ ಉದ್ಘಾಟನೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ರೂಪುರೇಷೆಗೆ ದಿನಾಂಕ ನಿಗದಿ ಮಾಡುತ್ತೇವೆ. ಇನ್ಮುಂದೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ 1:10 ಗಂಟೆಗೆ ಇಳಿಯಲಿದೆ ಎಂದು ಹೇಳಿದ್ದಾರೆ.

ಮುಂದುವರಿದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru Chennai Expressway) ಕಾರಿಡಾರ್ ಬಗ್ಗೆ ಗಡ್ಕರಿ ಮಾಹಿತಿ ನೀಡಿದ್ದಾರೆ.

17 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಚೆನ್ನೈ ಹೆದ್ದಾರಿ ನಿರ್ಮಾಣ ಆಗಲಿದೆ. ಇವತ್ತು ಕಾಮಗಾರಿಯ ಪರಿವೀಕ್ಷಣೆ ನಡೆಸಿದ್ದೇನೆ.

ಮೂರು ಹಂತಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಆಂಧ್ರ-ತಮಿಳುನಾಡು ನಡುವೆ ಎಕ್ಸ್ಪ್ರೆಸ್ ವೇ ನಿರ್ಮಾಣ ಆಗಲಿದೆ.

ಕರ್ನಾಟಕದಲ್ಲಿ 5,069 ಕೋಟಿ ವೆಚ್ಚದಲ್ಲಿ ಮೂರು ಹಂತಗಳಲ್ಲಿ 71 ಕಿಮೀ ಕಾಮಗಾರಿ ನಡೆಯಲಿದೆ. ಈಗಾಗಲೇ ಶೇ.32 ರಿಂದ ಶೇ.36 ರಷ್ಟು ಕಾಮಗಾರಿ ಮುಗಿದಿದೆ ಎಂದು ವಿವರಿಸಿದ್ದಾರೆ.

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

FILM

ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

Published

on

ಬೆಂಗಳೂರು : ಹುಬ್ಬಳ್ಳಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಈಗಾಗಲೇ ಆರೋಪಿ ಫಯಾಜ್ ನನ್ನು ಬಂಧಿಸಿದ್ದಾರೆ. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ.
ಇದೀಗ ಸಿನಿ ತಾರೆಯರೂ ಕೂಡ ಘಟನೆಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.

 

ಅತ್ಯಂತ ಹೀನ ಕೃತ್ಯ

ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿ, ಸಹೋದರಿ ನೇಹಾ ಹಿರೇಮಠ್ ರ ಹ*ತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹ*ತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದಿದ್ದಾರೆ.

ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? 


ಘಟನೆ ಬಗ್ಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಆಕ್ರೋಶ ಹೊರ ಹಾಕಿದ್ದಾರೆ. ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್ ಎಂದಿದ್ದಾರೆ.


ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲೇ ಹ*ತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್‌ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಎನ್ಕೌಂಟರ್ ಮಾಡಬೇಕು :


ನಟಿ ಕಾವ್ಯಾ ಶಾಸ್ತ್ರಿಯೂ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಹಂ*ತಕ ಫಯಾಜ್‌ನನ್ನು ಎನ್ಕೌಂಟರ್ ಮಾಡಬೇಕು. ಅವನಿಗೆ ಯಾವುದೇ ಕರುಣೆ ಬೇಕಾಗಿಲ್ಲ. ನೇಹಾ ಹಿರೇಮಠ್ ಕೊ*ಲೆ ಖಂಡನೀಯ. ಕೊ*ಲೆಗಾರನಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಪಾಠವಾಗಬೇಕು ಎಂದು ಬರೆದುಕೊಂಡಿದ್ದಾರೆ.

ಘಟನೆ ಏನು ?

ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಫಯಾಜ್ ಎಂಬಾತ ಕಾಲೇಜ್ ಕ್ಯಾಂಪಸ್ ನಲ್ಲಿ ಚಾಕುವಿನಿಂದ ಇರಿದು ಎಪ್ರಿಲ್ 18 ರಂದು ಹ*ತ್ಯೆ  ಮಾಡಿದ್ದ. ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಹಾ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಸದ್ಯ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

Continue Reading

LATEST NEWS

ಮೋದಿ ಹಾಡು ಶೇರ್ ಮಾಡಿ ಎಂದಿದಕ್ಕೆ ಹಿಗ್ಗಾಮುಗ್ಗ ಯುವಕನಿಗೆ ಥಳಿತ..! ಏನಿದು ಪ್ರಕರಣ?

Published

on

ಮೈಸೂರು: ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಹಾಡೊಂದನ್ನು ಶೇರ್ ಮಾಡುವಂತೆ ಹೇಳಿದ್ದಕ್ಕೆ ಅನ್ಯಕೋಮಿನ ಯುವಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.  ಪ್ರಕರಣದ ಕುರಿತು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

rohith

Read More..; ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ

ಏನಿದು ಪ್ರಕರಣ?

ರೋಹಿತ್ ರಮಣ ಎಂಬ ಯುವಕ ಮೋದಿಗೆ ಸಂಬಂಧಪಟ್ಟ ಹಾಡನ್ನು ಎಲ್ಲೆಡೆ ಶೇರ್ ಮಾಡುತ್ತಿದ್ದರು. ಮೈಸೂರಿನ ಸರಕಾರಿ ಗೆಸ್ಟ್ ಹೌಸ್‌ನಲ್ಲಿ ರೋಹಿತ್ ಕುಳಿತಿದ್ದಾಗ, ಈ ವೇಳೆ ಅಲ್ಲಿಗೆ ಬಂದ ಯುವಕನೊಬ್ಬನಿಗೆ ಮೋದಿಯ ಹಾಡನ್ನು ತೋರಿಸುತ್ತಾನೆ. ಆತ ಸಾಂಗ್ ಬಹಳ ಚೆನ್ನಾಗಿದೆ. ನನ್ನ ಸ್ನೇಹಿತರಿಗೂ ತೋರಿಸು ಎಂದು ಹೇಳಿ ನಿರ್ಜನ ಪ್ರದೇಶಕ್ಕೆ ರೋಹಿತ್‌ನನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅನ್ಯಕೋಮಿನ ಯುವಕರ ತಂಡ ರೋಹಿತ್‌ನನ್ನು ಹಿಗ್ಗಾಮುಗ್ಗ ಥಳಿಸಿ, ಮುಖಕ್ಕೆ ಬಿಯರ್ ಸುರಿದರು. ನನ್ನ ಕೈ ಕೊಯ್ದು ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿಪುರಂ ಪೊಲೀಸ್ ನೇತೃತ್ವದಲ್ಲಿ ಹಲ್ಲೆಗೊಳಗಾದ ಯುವಕ ರೋಹಿತ್‌ನ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಪ್ರಕರಣ ನಜರಬಾದ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೆ ವರ್ಗಾಯಿಸಲಾಗಿದೆ.

 

Continue Reading

LATEST NEWS

Trending