Connect with us

    DAKSHINA KANNADA

    ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ

    Published

    on

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜೂ.26ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್‌ ಅಥವಾ ರೆಡ್‌ ಅಲರ್ಟ್‌ನ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದ್ದಾರೆ.

    ಇನ್ನು ಬಂಟ್ವಾಳದ ಬಿ.ಸಿ.ರೋಡ್‌- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಳ್ಳುವ ಫ್ಲೈಓವರ್‌ ಕಾಮಗಾರಿಯಿಂದ ಹೆದ್ದಾರಿ ಅವ್ಯವಸ್ಥೆ ಮುಂದುವರಿದಿದ್ದು, ನಿನ್ನೆ ಮಧ್ಯಾಹ್ನದ ಬಳಿಕ ಸುರಿದ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕದ ಸರ್ವೀಸ್‌ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ನಿರಂತರ ಸಮಸ್ಯೆಯಾಗುತ್ತಿದ್ದು, ವಾಹನಗಳು ನೀರಿನಲ್ಲೇ ಸಂಚರಿಸುವಂತಾಗಿತ್ತು.

    ಸಣ್ಣ ವಾಹನಗಳ ಚಕ್ರಗಳು ಪೂರ್ತಿ ಮುಳುಗುವಷ್ಟರ ಮಟ್ಟಿಗೆ ರಸ್ತೆಯಲ್ಲಿ ನೀರು ತುಂಬಿತ್ತು. ಹೆದ್ದಾರಿ ಕಾಮಗಾರಿ ಪ್ರಾರಂಭವಾದಂದಿನಿಂಲೂ ಸಂಚಾರ ನಿರಂತರ ತೊಂದರೆಯಾಗುತ್ತಿದೆ. ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ನೂತನ ಸಂಸದರು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಪದೇಪದೆ ಸೂಚನೆ ನೀಡಿದ್ದು, ಸ್ವತಃ ದ.ಕ.ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸಮರ್ಪಕ ಕಾಮಗಾರಿ ನಿರ್ವಹಣೆಗೆ ನಿರ್ದೇಶನ ನೀಡಿದರೂ ಸಮಸ್ಯೆ ಯಥಾಸ್ಥಿತಿಯಲ್ಲೇ ಇದೆ ಎನ್ನುವುದಕ್ಕೆ ರವಿವಾರದ ಕೃತಕ ನೆರೆ ಸಾಕ್ಷಿಯಾಯಿತು.

    ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಂಭಾವ್ಯ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

    Published

    on

    ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.

    ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು,  ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.

    ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.

    ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.

    Continue Reading

    DAKSHINA KANNADA

    ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

    Published

    on

    ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.

    ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.

    ಈ ಕಾರು ಮಾಲಕ ಬಿಸಿ ರೋಡಿನ ಗುರುದೀಪ್ ಎಂದು ತಿಳಿದು ಬಂದಿದ್ದು, ಕಾರು ಬಿ ಎಂ ಡಬ್ಲ್ಯೂ ಕಂಪೆನಿಗೆ ಸೇರಿದ 2011-12 ಮಾಡೆಲ್‌ನದ್ದಾಗಿದೆ.

     

    Continue Reading

    LATEST NEWS

    Trending