Friday, July 1, 2022

ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ರಾಜ್ಯ ಸರಕಾರದಿಂದ ತಾರ್ಕಿಕ ಅಂತ್ಯ..!

ಮಂಗಳೂರು : ಕಳೆದ ಕೆಲ ದಿನಗಳಿಂದ ಕರಾವಳಿಯ ಜಿಲ್ಲೆಗಳಲ್ಲಿ ಭುಗಿಲೆದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ರಾಜ್ಯ ಸರಕಾರ ತಾರ್ಕಿಕ ಅಂತ್ಯ ನೀಡುವುದಕ್ಕೆ ಮುಂದಾಗಿದೆ.

ರಾಜ್ಯದ ಎಲ್ಲ ಸರಕಾರಿ, ಖಾಸಗಿ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ನಿಗದಿಗೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಇಂದು ಸಂಜೆ ಆದೇಶ ಪ್ರಕಟಿಸಲಾಗಿದೆ.

ಸಮವಸ್ತ್ರಕ್ಕೆ ಸಂಬಂಧಪಟ್ಟಂತೆ ನಾನಾ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಆಧರಿಸಿ ಈ ಆದೇಶವನ್ನು ಸಿದ್ದಪಡಿಸಲಾಗಿದ್ದು, ಶಾಲಾ ಅಭಿವೃದ್ಧಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಲಾಗಿದೆ.

ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರವನ್ನೇ ಧರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ಧಿ ಮಂಡಳಿ ಮೇಲ್ವಿಚಾರಣಾ ಸಮಿತಿ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು.

ಸಮವಸತ್ರವನ್ನು ನಿಗದಿ ಪಡಿಸದೇ ಇದ್ದಲ್ಲಿ, ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ.

ಹೀಗಾಗಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದೇ ಇರುವಂಥ ಉಡುಪುಗಳನ್ನು ಧರಿಸುವುದು ಸೂಕ್ತ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಿಜಾಬ್ ಧರಿಸದೇ ಶಾಲೆಗೆ ಬರುವಂತೆ ನಿರ್ದೇಶಿಸುವುದು ಸಂವಿಧಾನದ 25 ನೇ ಅನುಚ್ಛೇದದ ಉಲ್ಲಂಘನೆಯಾಗುವುದಿಲ್ಲ ಎಂದು ಈಗಾಗಲೇ ಪ್ರಮಾಣಿತವಾಗಿದೆ.

ಕರ್ನಾಟಕ ಶಿಕ್ಷಣ ಕಾಯಿದೆ-1983ರ ಅನ್ವಯ ರಚಿತವಾದ ನಿಯಮಗಳ ಉಲ್ಲಂಘನೆಯಾಗುವುದಿಲ್ಲ ಎಂದು ಪ್ರತಿಪಾದಿಸಿರುವ ಇಲಾಖೆ ಸಮವಸ್ತ್ರವನ್ನು ಕಡ್ಡಾಯಗೊಳಿಸಿದೆ.

ಇದರೊಂದಿಗೆ ಕಳೆದ ಕೆಲದ ಇನಗಳಿಂದ ಉಡುಪಿ,ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ನಡೆಯುತ್ತಿದ್ದ ಹಿಜಾಬ್ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ವಿಧಿವಶ

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ.ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ...

ಬೆಳ್ತಂಗಡಿಯಲ್ಲಿ OTP ಫ್ರಾಡ್: ಕಾಲ್ ಮಾಡಿ 15 ಸಾವಿರ ಲಪಟಾಯಿಸಿದ ಭೂಪ

ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ‌ ನಿಡ್ಲೆ ಗ್ರಾಮದ ಬಿರ್ಲಾಜೆ...

ಶಿಥಿಲಗೊಂಡ ಶಿರಾಡಿ ಘಾಟ್ ರಸ್ತೆಯನ್ನು ಕೂಡಲೇ ಸರಿಪಡಿಸಿ-ಅಧಿಕಾರಿಗಳಿಗೆ ಸಚಿವದ್ವಯರ ಆದೇಶ

ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ...