Sunday, November 27, 2022

ಹಿಜಾಬ್‌ ವಿವಾದ: ಮೊದಲ ಬಾರಿಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನವದೆಹಲಿ: ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ಇಂದು ಮೊದಲ ಬಾರಿಗೆ ನಡೆಯಲಿದೆ.

ಸುಮಾರು ಮೂರೂವರೆ ತಿಂಗಳ ಬಳಿಕ ವಿಚಾರಣೆ ನಡೆಯುತ್ತಿದೆ. ಹಿಜಾಬ್ ವಿಚಾರವಾಗಿ ಹೈಕೋರ್ಟ್ ನಲ್ಲಿ ನೀಡಿರುವ ತೀರ್ಪಿನ ವಿರುದ್ಧ ಒಟ್ಟು 23 ಅರ್ಜಿ ಸಲ್ಲಿಕೆಯಾಗಿದೆ.

ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಚ್‌ ಮೊರೆ ಹೋಗಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿತ್ತು. ಅಲ್ಲದೆ, ಹಿಜಾಬ್‌ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಉಡುಪಿಯಲ್ಲಿ ಆರಂಭವಾದ ಹಿಜಾಬ್‌ ವಿವಾದ ರಾಜ್ಯಾದ್ಯಂತ ಹಿಜಾಬ್‌ ಮತ್ತು ಕೇಸರಿ ಶಾಲು ಸಂಘರ್ಷಕ್ಕೆ ಕಾರಣವಾಗಿತ್ತು.

ನಂತರ ಇದು ಜಾತ್ರೆ, ದೇವಸ್ಥಾನಗಳ ಮಳಿಗೆಗಳಿಗೂ ವಿಸ್ತರಿಸಿ, ಧರ್ಮ ಸಂಘರ್ಷ ಸೃಷ್ಟಿಹಾಕಿತ್ತು.

 

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...