ಬಂಟ್ವಾಳ: ಹಿಜಾಬ್ ಒಂದು ಪ್ರಕರಣದ ಹಿಂದೆ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದ್ದು,
ಈ ಸಂಚನ್ನು ರೂಪಿಸಿದವರ ವಿರುದ್ಧ NIA (ರಾಷ್ಟ್ರೀಯ ತನಿಖಾದಳ) ಮುಖಾಂತರ ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ವಿಶ್ವಹಿಂದೂಪರಿಷತ್ ಬಜರಂಗದಳ ಒತ್ತಾಯಿಸಿ ಬಂಟ್ವಾಳ ತಾಲೂಕು ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಂಚಾಲಕ್ ಭರತ್ ಕುಮ್ಡೇಲು, ಸಹ ಸಂಚಾಲಕ್ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಉಪಾಧ್ಯಕ್ಷ ಸುರೇಶ್ ಬೆಂಜನಪದವವು,
ಬಜರಂಗದಳ ಸಂಚಾಲಕ್ ಶಿವು ತುಂಬೆ, ಕಾರ್ಯದರ್ಶಿ ದೀಪಕ್ ಬಂಟ್ವಾಳ, ವಿದ್ಯಾರ್ಥಿ ಪ್ರಮುಖ್ ಪ್ರತೀಕ್ ಎರ್ಮಾಳ ಹಾಗೂ ರಾಜೇಶ್ ಬಂಟ್ವಾಳ ಉಪಸ್ಥಿತರಿದ್ದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.