Connect with us

DAKSHINA KANNADA

ಮಂಗಳೂರು: ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಸುಳ್ಳು ದೂರು ದಾಖಲು: ಸೂಕ್ತ ಕ್ರಮಕ್ಕೆ ಸಿಎಫ್ಐ ಆಗ್ರಹ

Published

on

ಮಂಗಳೂರು: ನಗರದ ರಥಬೀದಿಯಲ್ಲಿರುವ ದಯಾನಂದ ಪೈ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕ್ಯಾಂಫಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ಇದರ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಕವೂರ್ ನೇತೃತ್ವದಲ್ಲಿ ಉಪ ಆಯುಕ್ತರಿಗೆ ಮನವಿಯನ್ನು ಸಲ್ಲಿಕೆ ಮಾಡಲಾಯಿತು.

ಪ್ರಕರಣದ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆದು ತಪ್ಪಿತಸ್ಥರ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಪ್ರಾಂಶುಪಾಲರ

ಅನುಮತಿಯೊಂದಿಗೆ ಇಂಟರ್ನಲ್ ಬರೆಯಲು ಪರೀಕ್ಷೆ ಬರೆಯಲು ಹೋದ ಮುಸ್ಲಿಂ ವಿದ್ಯಾರ್ಥಿನಿ ಹಿಬಾ ಶೇಕ್ ಎಂಬವಳ ಜತೆ ಇತರ ವಿದ್ಯಾರ್ಥಿನಿಯರನ್ನು ಅದೇ ಕಾಲೇಜಿನ ಎಬಿವಿಪಿಯ ಯೂನಿಟ್ ಅಧ್ಯಕ್ಷ ಸಾಯಿ ಸಂದೇಶ್ ಮತ್ತು ಆತನ ಸ್ನೇಹಿತರು ಪರೀಕ್ಷೆ ಬರೆಯದಂತೆ ಬೆದರಿಸಿ, ಅವಾಚ್ಯವಾಗಿ ನಿಂದಿಸಿದ್ದಾರೆ.

ನೀನು ಭಯೋತ್ಪಾದಕಿ, ದೇಶದ್ರೋಹಿ ಎಂದು ಧರ್ಮ ನಿಂದನೆ ಮಾಡಿದ್ದಾರೆ. ಆದರೆ, ತನ್ನ ಮೇಲಾದ ದೌರ್ಜನ್ಯದ ವಿರುದ್ಧ ಕಾನೂನಾತ್ಮಕವಾಗಿ ನ್ಯಾಯ ಪಡೆಯಲು ಮುಂದಾದ ಕಾರಣಕ್ಕೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆಯೇ ಕಾಲೇಜಿನ ಎಬಿವಿಪಿಯ ಕಾರ್ಯದರ್ಶಿಯಾದ ಕವನಾ ಶೆಟ್ಟಿ ಎಂಬುವವರು ಸುಳ್ಳು ದೂರು ದಾಖಲಿಸಿದ್ದಾರೆ.

ಘಟನೆ ನಡೆಯುವ ವೇಳೆ ಆ ಸ್ಥಳದಲ್ಲೇ ಇರದವರು ಸುಳ್ಳು ದೂರು ಕೊಟ್ಟು ಅನ್ಯಾಯಕ್ಕೊಳಗಾದ ವಿದ್ಯಾರ್ಥಿನಿ ಹೀಬಾ ಶೇಖ್ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ .ಘಟನೆ ನಡೆದ ನಂತರ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆಗಳು, ನೀಚ ಶಬ್ದಗಳಿಂದ ನಿಂದಿಸಲಾಗಿದೆ.

ಈ ಪ್ರಕರಣದ ಕುರಿತಾಗಿ ಕೂಲಂಕಷವಾಗಿ ತನಿಖೆ ನಡೆಸಿ, ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ

ನಗರ ಪೊಲೀಸ್ ಆಯುಕ್ತ  ಎನ್ ಶಶಿಕುಮಾರ್ ಅವರಿಗೆ ಕ್ಯಾಂಪಸ್ ಫ್ರಂಟ್ ಆಫ್ ವತಿಯಿಂದ ನಗರ ಪೋಲಿಸ್ ಆಯುಕ್ತರಿಗೆ ಉಪ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಕೆ ಮಾಡಿದ್ದೇವೆ ಎಂದರು.

 

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending