Connect with us

  LATEST NEWS

  BREAKING NEWS: ಹಿಜಾಬ್‌ ವಿವಾದ-ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಪತ್ರ

  Published

  on

  ಬೆಂಗಳೂರು: ಹಿಜಾಬ್‌ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಏಕಸದಸ್ಯ ಆದೇಶ ಹೊರಡಿಸಿದ್ದಾರೆ.
  ಇಂದು ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅವರು ಈ ಬಗ್ಗೆ ಎಷ್ಟು ಪೀಠದಲ್ಲಿ ವಿಚಾರಣೆ ನಡೆಸಬೇಕು ಎಂಬುವುದನ್ನು ತೀರ್ಮಾನಿಸಲಿದ್ದಾರೆ ಎಂದು ಹಾಲಿ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಆದೇಶ ಬರೆಸಿದ್ದಾರೆ. ಆದರೆ ಮಧ್ಯಂತರ ಆದೇಶ ನೀಡುವುದಿಲ್ಲ.


  ವಿಸ್ತೃತ ಪೀಠ ಅಂದರೆ ಎರಡು ಅಥವಾ ಮೂರು, ಐದು ಅಥವಾ ಏಳು ಪೀಠ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ತೀರ್ಮಾನಿಸಲಿದ್ದಾರೆ. ಸದ್ಯ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

  LATEST NEWS

  ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

  Published

  on

  ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

  ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  LATEST NEWS

  ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

  Published

  on

  ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
  ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

  ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

  ಹೆಗಲಾದ ಪತ್ರಕರ್ತರು :
  ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

  ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

  ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
  ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
  ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

  ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

  Continue Reading

  DAKSHINA KANNADA

  ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

  Published

  on

  ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

  ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

  KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  Continue Reading

  LATEST NEWS

  Trending