BANTWAL
ಹೈಕೋರ್ಟ್ ತೀರ್ಪು ವಿರೋಧಿಸಿ ಪುತ್ತೂರು, ಸುಳ್ಯ, ವಿಟ್ಲ, ಬಂಟ್ವಾಳ ಸೇರಿ ಹಲವೆಡೆ ಬಂದ್ಗೆ ಉತ್ತಮ ಪ್ರತಿಕ್ರಿಯೆ
Published
3 years agoon
By
Adminಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು,
ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್ ಅಹ್ಮದ್ ರಾಜ್ಯ ಬಂದ್ಗೆ ಕರೆ ನೀಡಿದ್ದು, ಮಂಗಳೂರು ನಗರ, ಫರಂಗಿಪೇಟೆ, ಬಿಸಿರೋಡ್, ಪುತ್ತೂರು, ವಿಟ್ಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ಬಾಹುಳ್ಯವಿರುವ ಪ್ರದೇಶದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಬಹುತೇಕ ಅಂಗಡಿ, ವಾಣಿಜ್ಯ ಮಳಿಗೆ, ಹೊಟೇಲ್ಗಳು ಬಂದ್ನಲ್ಲಿ ಭಾಗಿಯಾಗಿವೆ.
ಮಂಗಳೂರಿನ ಬಂದರು ಪರಿಸರ, ಮೀನುಮಾರುಕಟ್ಟೆ, ಸ್ಟೇಟ್ಬ್ಯಾಂಕ್ ಪರಿಸರ, ಉಳ್ಳಾಲದ ಮುಕ್ಕಚ್ಚೇರಿ, ಕಂಡತ್ತ್ಪಳ್ಳಿ, ಕುದ್ರೋಳಿ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದವು.
ಮಂಗಳೂರಿನ ದಕ್ಕೆ ಪರಿಸರದಲ್ಲಿ ಎಲ್ಲಾ ಅಂಗಡಿಗಳು ಬಂದ್ ಆಗಿದ್ದು, ಬಹುತೇಕ ಬಿಕೋ ಎನ್ನುತ್ತಿರುವುದು ಕಂಡು ಬಂದಿದೆ. ಕೆಲವು ಶಿಕ್ಷಣ ಸಂಸ್ಥೆಗಳು ಹಾಗೂ ಮದ್ರಾಸಾಗಳು ಬಂದ್ನಲ್ಲಿ ಪಾಲ್ಗೊಂಡಿದ್ದವು. ಇನ್ನು ನಗರದ ಹೊರವಲಯದ ಪ್ರದೇಶಗಳಲ್ಲೂ ಕೆಲವು ಕಡೆಘಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವುದು ಕಂಡು. ವಿಟ್ಲ ಪೇಟೆಯಲ್ಲೂ ಕೂಡಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮುಸ್ಲಿಂ ವರ್ತಕರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇನ್ನು ಹೈಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬೆಂಬಲವಾಗಿ ಗುರುಪುರ ಅಡ್ಡೂರು ಪರಿಸರದಲ್ಲಿ ವ್ಯಾಪಕ ಬೆಂಬಲ ಕಂಡು ಬಂದಿದೆ. ಇಂದು ಮುಂಜಾನೆಯಿಂದಲೇ ಯಾವುದೇ ಅಂಗಡಿ ಮಾಲಕರು ಬಾಗಿಲು ತೆರೆಯದೆ ಬಂದ್ಗೆ ಬೆಂಬಲ ನೀಡಿದ್ದಾರೆ.
ನಗರದ ಬಹುತೇಕ ಕಡೆಗಳಲ್ಲಿ ಜನಸಂಖ್ಯೆ ಕೂಡಾ ವಿರಳವಾಗಿದ್ದು ಬಿಕೋ ಎಂದು ಕಂಡು ಬಂತು. ಮೀನು ಮಾರುಕಟ್ಟೆ, ದಿನಸಿ, ಮಾಂಸದ ಅಂಗಡಿಗಳೆಲ್ಲವೂ ಬಂದ್ ಆಗಿದ್ದು, ರಸ್ತೆಯುದ್ದಕ್ಕೂ ಎಲ್ಲೂ ಅಂಗಡಿಗಳು ತೆರೆದಿರುವುದು ಕಂಡು ಬಂದಿಲ್ಲ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ