LATEST NEWS
ಉಡುಪಿ ಕಾಲೇಜ್ ಹಿಜಾಬ್ ಪ್ರಕರಣ: ರಾಜಕೀಯ ಷಡ್ಯಂತ್ರವೆಂದ ಶಾಸಕ ರಘುಪತಿ ಭಟ್
Published
3 years agoon
By
Adminಉಡುಪಿ: ಇಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಉದ್ದೇಶಪೂರ್ವಕವಾಗಿ ಗೊಂದಲಗಳನ್ನು ಉಂಟು ಮಾಡಲಾಗುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಹಿಜಬ್ ವಿವಾದ ವಿಚಾರಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಯೂನಿಫಾರ್ಮ್ ಕಡ್ಡಾಯ ಇಲ್ಲ ಎಂಬ ಕಾನೂನಿದ್ದರೂ ಸರ್ಕಾರಿ ಪಿಯು ಕಾಲೇಜಿನಲ್ಲಿ 1985 ರಿಂದಲೂ ಸಮವಸ್ತ್ರ ಕಡ್ಡಾಯ ಎಂಬ ನಿಯಮವಿದೆ.
ಹಿಜಬ್ ಬೇಕೆಂದು ಈಗ ಹೀಗೆ ಒತ್ತಾಯ ಮಾಡುವವರು ಕಳೆದ ಒಂದೂವರೆ ವರ್ಷ ಹಿಂದೆ ಕಾಲೇಜು ಸಮವಸ್ತ್ರದಲ್ಲೇ ಕಾಲೇಜಿಗೆ ಬಂದಿದ್ದಾರೆ. ಯಾರದ್ದೋ ಕುಮ್ಮಕ್ಕಿನಿಂದ ಈ ಘಟನೆಯನ್ನು ರಾಜಕೀಯ ಗೊಳಿಸಲಾಗುತ್ತಿದೆ.
ಯೂನಿಫಾರ್ಮ್ ಬೇಕಾ ಬೇಡ್ವಾ ಎಂಬುದನ್ನು ಸರ್ಕಾರ ತೀರ್ಮಾನಿಸಲಿ. ಒಂದಾ ಯೂನಿಫಾರ್ಮ್ ಬೇಕಾದರೆ ಎಲ್ಲರೂ ಸಮಾನವಾದ ಯೂನಿಫಾರ್ಮ್ ಹಾಕಬೇಕು.
ಯೂನಿಫಾರ್ಮ್ ಬೇಡವಾದರೆ ಯಾರೂ ಏನೂ ಬೇಕಾದರೂ ಹಾಕಬಹುದು. ಜೀನ್ಸ್ ಪ್ಯಾಂಟ್, ರುಮಾಲ್, ಸ್ಲೀವ್ ಲೆಸ್ ಹಾಕಿಕೊಂಡು ಬರಲಿ ಯಾರೂ ಏನೂ ಬೇಕಾದರೆ ಹಾಕಲಿ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಕುರಿತು ಪದವಿ ಪೂರ್ವ ಕಾಲೇಜಿನ ಬೋರ್ಡ್‌ಗೆ ನಾವು ಪತ್ರವನ್ನು ಬರೆದಿದ್ದೇವೆ. ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲವರು ವಿವಾದ ಸೃಷ್ಟಿ ಮಾಡಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ಇದೆ.ಆ ಸೌಹಾರ್ದತೆಯ ವಾತಾವರಣ ಮುಂದುವರೆಯಲು ಬಿಡಿ ಎಂದು ಶಾಸಕರು ಮನವಿ ಮಾಡಿದ್ದಾರೆ.
FILM
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ
Published
4 minutes agoon
09/01/2025By
NEWS DESK2ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ ಜೋಡಿ ಭೇಟಿ ನೀಡಿದ್ದಾರೆ.
ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರ್ಷಿಕಾ ದಂಪತಿ ಹರಿಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇಗುಲಕ್ಕೆ ಭೇಟಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ ಹರ್ಷಿಕಾ ಮತ್ತು ಭುವನ್ ಹೊಸ ಬಾಳಿಗೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು. ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕಳೆದ ವರ್ಷ ಅಕ್ಟೋಬರ್ 3ರಂದು ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳ ಪಾಲನೆಯಲ್ಲಿ ಬ್ಯುಸಿಯಿರುವ ಹರ್ಷಿಕಾ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
International news
9/11 ದಾಳಿ: ಆರೋಪಿಗಳಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ?
Published
1 hour agoon
09/01/2025By
NEWS DESK3ಮಂಗಳೂರು/ವಾಷಿಂಗ್ಟನ್ : ಸುಮಾರು 3,000 ಜನರನ್ನು ಬಲಿಪಡೆದ 2001ರಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಆರೋಪಿಗಳ ಜತೆ ಮಾಡಿಕೊಂಡಿರುವ ವಿಚಾರಣಾಪೂರ್ವ ಒಪ್ಪಂದವನ್ನು ರದ್ದುಗೊಳಿಸುವಂತೆ ಸರ್ಕಾರವು ಫೆಡರಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.
ದಾಳಿಯ ಪ್ರಮುಖ ಸಂಚುಕೋರ ಖಾಲಿದ್ ಶೈಖ್ ಮೊಹಮ್ಮದ್ ಮತ್ತು ಇತರ ಇಬ್ಬರು ಆರೋಪಿಗಳು ಹಾಗೂ ಪ್ರಾಸಿಕ್ಯೂಟರ್ ಗಳ ನಡುವೆ ಈಚೆಗೆ ವಿಚಾರಣಾಪೂರ್ವ ಒಪ್ಪಂದ ಏರ್ಪಟ್ಟಿತ್ತು. ಇದರಿಂದ ಶೈಖ್ ಹಾಗೂ ಇತರರಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ದೊರೆತಿದೆ.
‘ಶೈಖ್ ಹಾಗೂ ಇತರ ಇಬ್ಬರು ಸಹ ಆರೋಪಿಗಳ ತಪ್ಪೊಪ್ಪಿಗೆ ಸ್ವೀಕರಿಸಿದರೆ, ಅವರನ್ನು ಬಹಿರಂಗವಾಗಿ ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಸರ್ಕಾರ ಕಳೆದುಕೊಳ್ಳಲಿದೆ. ಸಾವಿರಾರು ಮಂದಿಯ ಸಾವಿಗೆ ಕಾರಣವಾದ ಮತ್ತು ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದ ಘೋರ ಕೃತ್ಯದ ಆರೋಪ ಹೊತ್ತಿರುವ ಮೂವರಿಗೆ ಗಲ್ಲು ಶಿಕ್ಷೆ ವಿಧಿಸುವ ಅವಕಾಶವೂ ತಪ್ಪಲಿದೆ’ ಎಂದು ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ನ್ಯಾಯಾಂಗ ಇಲಾಖೆಯು ಮಂಗಳವಾರ ವಾದಿಸಿದೆ.
ಇದನ್ನೂ ಓದಿ: ತಿರುಪತಿ ದುರಂ*ತಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂ*ತಾಪ
ಈ ಮೂವರು ಆರೋಪಿಗಳು ಕಳೆದ ಎರಡು ದಶಕಗಳಿಂದ ಕ್ಯೂಬಾದ ಗ್ವಾಂಟನಾಮೊದಲ್ಲಿರುವ ಅಮೆರಿಕ ಸೇನೆಯ ಜೈಲಿನಲ್ಲಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಖಾಲಿದ್ ಶೈಖ್ ತಪ್ಪೊಪ್ಪಿಗೆ ಹೇಳಿಕೆಯನ್ನು ಶುಕ್ರವಾರ ನೀಡಲಿದ್ದಾನೆ. ಇದರ ನಡುವೆಯೇ ಸರ್ಕಾರವು ಮೇಲ್ಮನವಿ ನ್ಯಾಯಾಲಯದ ಮೊರೆ ಹೋಗಿದೆ.
2001ರ ಸೆಪ್ಟೆಂಬರ್ 11ರಂದು ಭಯೋತ್ಪಾದಕರಿಂದ ಅಪಹರಿಸಲಾದ ಎರಡು ಪ್ರಯಾಣಿಕ ವಿಮಾನಗಳು ನ್ಯೂಯಾರ್ಕ್ ನಗರದ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳಿಗೆ ಡಿಕ್ಕಿ ಹೊಡೆದಿದ್ದವು. ಮೂರನೇ ವಿಮಾನವು ವಾಷಿಂಗ್ಟನ್ ನಲ್ಲಿರುವ ಪೆಂಟಗನ್ ಗೆ ಅಪ್ಪಳಿಸಿತ್ತು. ನಾಲ್ಕನೇ ವಿಮಾನದಲ್ಲಿದ್ದ ಪ್ರಯಾಣಿಕರು ಅಪಹರಣಕಾರರೊಂದಿಗೆ ಹೋರಾಡಿದ್ದರಿಂದ ಅದು ಪೆನ್ಸಿಲ್ವೇನಿಯಾದಲ್ಲಿ ಪತನಗೊಂಡಿತ್ತು.
LATEST NEWS
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಸಹೋದರ ‘ಚೈತನ್ಯ’ ವಿಧಿವಶ.!
Published
2 hours agoon
09/01/2025By
NEWS DESK2ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ದಿವಂಗತ ಅಪರ್ಣಾ ಸಹೋದರ ಚೈತನ್ಯ ಇಂದು ನಿಧನರಾಗಿದ್ದಾರೆ ಎಂದು ಅಪರ್ಣಾ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪರ್ಣೆಯ ಅಣ್ಣ ಚೈತನ್ಯ ನಿನ್ನೆ ನಡುರಾತ್ರಿಯಲ್ಲಿ ಈ ಇಹತೊರೆದು ಸರಿದಿದ್ದಾರೆ. ತೀವ್ರತಮ ವಿಷಾದ. ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರದೂನು ಎಂದು ಹೇಳಿದ್ದಾರೆ.
LATEST NEWS
ತಿರುಪತಿ ದುರಂ*ತಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂ*ತಾಪ
ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ
ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್
ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು
KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ
Trending
- DAKSHINA KANNADA6 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- FILM1 day ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- FILM3 days ago
ಯಶ್ ಫ್ಯಾನ್ಸ್ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್ನಿಂದ ಸಿಕ್ತು ಸಿಹಿ ಸುದ್ದಿ
- BIG BOSS5 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?