Wednesday, October 5, 2022

ಉಡುಪಿ ಕಾಲೇಜ್‌ ಹಿಜಾಬ್ ಪ್ರಕರಣ: ರಾಜಕೀಯ ಷಡ್ಯಂತ್ರವೆಂದ ಶಾಸಕ ರಘುಪತಿ ಭಟ್‌

ಉಡುಪಿ: ಇಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಉದ್ದೇಶಪೂರ್ವಕವಾಗಿ ಗೊಂದಲಗಳನ್ನು ಉಂಟು ಮಾಡಲಾಗುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.


ಹಿಜಬ್ ವಿವಾದ ವಿಚಾರಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಯೂನಿಫಾರ್ಮ್‌ ಕಡ್ಡಾಯ ಇಲ್ಲ ಎಂಬ ಕಾನೂನಿದ್ದರೂ ಸರ್ಕಾರಿ ಪಿಯು ಕಾಲೇಜಿನಲ್ಲಿ 1985 ರಿಂದಲೂ ಸಮವಸ್ತ್ರ ಕಡ್ಡಾಯ ಎಂಬ ನಿಯಮವಿದೆ.

ಹಿಜಬ್ ಬೇಕೆಂದು ಈಗ ಹೀಗೆ ಒತ್ತಾಯ ಮಾಡುವವರು ಕಳೆದ ಒಂದೂವರೆ ವರ್ಷ ಹಿಂದೆ ಕಾಲೇಜು ಸಮವಸ್ತ್ರದಲ್ಲೇ ಕಾಲೇಜಿಗೆ ಬಂದಿದ್ದಾರೆ. ಯಾರದ್ದೋ ಕುಮ್ಮಕ್ಕಿನಿಂದ ಈ ಘಟನೆಯನ್ನು ರಾಜಕೀಯ ಗೊಳಿಸಲಾಗುತ್ತಿದೆ.

ಯೂನಿಫಾರ್ಮ್ ಬೇಕಾ ಬೇಡ್ವಾ ಎಂಬುದನ್ನು ಸರ್ಕಾರ ತೀರ್ಮಾನಿಸಲಿ. ಒಂದಾ ಯೂನಿಫಾರ್ಮ್‌ ಬೇಕಾದರೆ ಎಲ್ಲರೂ ಸಮಾನವಾದ ಯೂನಿಫಾರ್ಮ್‌ ಹಾಕಬೇಕು.

ಯೂನಿಫಾರ್ಮ್‌ ಬೇಡವಾದರೆ ಯಾರೂ ಏನೂ ಬೇಕಾದರೂ ಹಾಕಬಹುದು. ಜೀನ್ಸ್‌ ಪ್ಯಾಂಟ್‌, ರುಮಾಲ್‌, ಸ್ಲೀವ್‌ ಲೆಸ್‌ ಹಾಕಿಕೊಂಡು ಬರಲಿ ಯಾರೂ ಏನೂ ಬೇಕಾದರೆ ಹಾಕಲಿ ಎಂದು ಹೇಳಿದರು.

ಈ ಬಗ್ಗೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಕುರಿತು ಪದವಿ ಪೂರ್ವ ಕಾಲೇಜಿನ ಬೋರ್ಡ್‌ಗೆ ನಾವು ಪತ್ರವನ್ನು ಬರೆದಿದ್ದೇವೆ. ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲವರು ವಿವಾದ ಸೃಷ್ಟಿ ಮಾಡಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ಇದೆ.ಆ ಸೌಹಾರ್ದತೆಯ ವಾತಾವರಣ ಮುಂದುವರೆಯಲು ಬಿಡಿ ಎಂದು ಶಾಸಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...